ನೇ*ಣಿಗೆ ಶರಣಾದ ಪಿಯುಸಿ ವಿದ್ಯಾರ್ಥಿ !

Written by Mahesha Hindlemane

Published on:

ಕೊಪ್ಪ ; ದ್ವಿತೀಯ ಪಿಯುಸಿ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ನಿಲುವಾಗಿಲು ಗ್ರಾಮದಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಸುಶಾಂತ್ (17) ಆತ್ಮಹ*ತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಹರಿಹರಪುರ ಹೋಬಳಿಯ ನಿಲುವಾಗಿಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಡ್ತಾಳ್ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ.

ಕೊಪ್ಪದ ಜಿಜೆಸಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡಿದ್ದಾನೆ.

ಆತ್ಮಹ*ತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಹರಿಹರಪುರ ಪೊಲೀಸ್ ಠಾಣಾ ಸಿಬ್ಬಂದಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Comment