ರಿಪ್ಪನ್‌ಪೇಟೆ ; ಸಮೀಪದ ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ 2ನೇ ಜಾತ್ರಾ ಮಹೋತ್ಸವವು ಇಂದು ವಿಜೃಂಭಣೆಯಿಂದ ಜರುಗಿತು.
ದೇವಸ್ಥಾನದ ಪ್ರಧಾನ ಅರ್ಚಕ ಭಾಸ್ಕರ್‌ಜೋಯ್ಸ್ ನೇತೃತ್ವದಲ್ಲಿ ದೇವಿಗೆ ವಿಶೇಷ ಅಲಂಕಾರ, ಪೂಜಾ ಕೈಂಕರ್ಯದೊಂದಿಗೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿತರಣೆ ನೆರವೇರಿತು.
ಸಾಗರ, ಹೊಸನಗರ, ತೀರ್ಥಹಳ್ಳಿ, ಸೇರಿದಂತೆ ಮಲೆನಾಡಿನ ವಿವಿಧ ಭಾಗದ ಈಡಿಗರು (ದೀವರು) ಸೇರಿದಂತೆ ನಾನಾ ಸಮುದಾಯದ ಆರಾಧ್ಯ ದೇವರಾದ ಶ್ರೀ ಜೇನುಕಲ್ಲಮ್ಮ ದೇವಿಗೆ ಸಾಂಪ್ರದಾಯಿಕ ಪೂಜೆ ನೆರವೇರಿಸುವ ಮೂಲಕ ಜಾತ್ರಾ ಮಹೋತ್ಸವವು ಅದ್ದೂರಿಯಾಗಿ ಜರುಗಿತು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.