ಹೊಸನಗರ ; ಹೊಳೆ ದಾಟುವಾಗ ತೆಪ್ಪ ಮಗುಚಿ ಯುವಕ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೊಸೂರು (ಸಂಪೆಕಟ್ಟೆ) ಗ್ರಾಪಂ ವ್ಯಾಪ್ತಿಯ ಬಂಟೋಡಿ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಪೂರ್ಣೇಶ್ (22) ಮೃತ ದುರ್ಧೈವಿ. ಅದೃಷ್ಟವಶಾತ್ ಜೊತೆಯಲ್ಲಿದ್ದ ಶರತ್ ಮತ್ತು ರಂಜನ್ ಎಂಬ ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾಲು ಸಂಕ ನಿರ್ಮಾಣ ಮಾಡುವಂತೆ 20 ವರ್ಷಗಳಿಂದ ಮನವಿ ಮಾಡುತ್ತಿದ್ದರೂ ಜನಪ್ರತಿನಿಧಿಗಳು ಸ್ಪಂದಿಸಿಲ್ಲ ಎಂದು ಸ್ಥಳೀಯರು ಕಿಡಿಕಾರಿದ್ದಾರೆ.
ಮೃತದೇಹಕ್ಕಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.