ರಾಜ್ಯದ 10 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

Written by malnadtimes.com

Published on:

KARNATAKA RAIN | ರಾಜ್ಯದ 10 ಜಿಲ್ಲೆಗಳಲ್ಲಿ ಭಾರೀ ಮಳೆ (Heavy Rain)ಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

WhatsApp Group Join Now
Telegram Group Join Now
Instagram Group Join Now

ರಾಜ್ಯದ ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳನ್ನು ಮುಂಗಾರು ಆವರಿಸಿದ್ದು, ಜೂನ್‌ 4 ರಿಂದ 7 ದಿನಗಳು ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಲಿದೆ. ಗುಡುಗು-ಮಿಂಚಿನ ಆರ್ಭಟದೊಂದಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.

ರಾಜ್ಯದ ಹಲವೆಡೆ ಮುಂಗಾರು ಕೊಂಚ ಮಟ್ಟಿಗೆ ಕ್ಷೀಣಿಸಿದೆ. ವಿಶೇಷವಾಗಿ ಬೆಂಗಳೂರು ನಗರದಲ್ಲಿ ಕಳೆದ 2 ದಿನಗಳಲ್ಲಿ ಮಳೆ ಇಳಿಕೆಯಾಗಿದೆ. ಆದರೆ, ಇಂದಿನಿಂದ ಮತ್ತೆ ಮಳೆಯಾಗುವ ಸಾಧ್ಯತೆಯೂ ಇದೆ.

karnataka rain

ದಕ್ಷಿಣ ಒಳನಾಡು ಜಿಲ್ಲೆಗಳಾದ ಚಿಕ್ಕಬಳ್ಳಾಪುರ (Chikkaballapura), ಚಿಕ್ಕಮಗಳೂರು (Chikkamagaluru), ಚಿತ್ರದುರ್ಗ (Chithradurga), ತುಮಕೂರು (Thumakuru) ಕಡೆಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯು ಈಗಾಗಲೇ ಉಡುಪಿ (Udupi), ದಕ್ಷಿಣ ಕನ್ನಡ (Dakshina Kannada), ಕೊಡಗು (Kodagu), ಮೈಸೂರು (Mysore) ಹಾಗೂ ಮಂಡ್ಯ (Mandya) ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.

ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗದಿದ್ದರೂ ಮುಂದಿನ ದಿನಗಳಲ್ಲಿ ಮುಂಗಾರು ಚುರುಕಾಗುವ ಸಾಧ್ಯತೆ ಇದೆ. ಜೂನ್‌ 2 ರಂದು ರಾಜ್ಯಕ್ಕೆ ಮುಂಗಾರು ಅಧಿಕೃತವಾಗಿ ಪ್ರವೇಶ ಮಾಡಿದೆ. ಆದಾಗ್ಯೂ ಕರಾವಳಿ ಭಾಗದ ಕೆಲವು ಕಡೆಗಳಲ್ಲಷ್ಟೇ ಮುಂಗಾರು ಮಳೆ ಉತ್ತಮವಾಗಿ ಸುರಿದಿದೆ.

Read More

ಶಿವಮೊಗ್ಗದಲ್ಲಿ ಗೀತಾ ಶಿವರಾಜ್‌ಕುಮಾರ್ ಗೆ ಸೋಲು, ಫಲಿತಾಂಶದ ಕುರಿತು ಏನಂದ್ರು ?

Leave a Comment