ಬಿಡುಗಡೆಗೊಂಡ ಅನುದಾನವನ್ನು ಸಕಾಲದಲ್ಲಿ ಸದ್ಬಳಕೆ ಮಾಡಿಕೊಳ್ಳಿ : ಬಿ.ಬಿ.ಕಾವೇರಿ

Written by Koushik G K

Published on:

ಶಿವಮೊಗ್ಗ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಅಜೀಂ ಪ್ರೇಮ್ಜಿ ಫೌಂಡೇಶನ್ ವತಿಯಿಂದ ಮಕ್ಕಳ ಪೌಷ್ಟಿಕ ಆಹಾರ ಮತ್ತು ಸುರಕ್ಷತೆಗೆ ನೀಡಲಾಗಿರುವ ₹1500 ಕೋಟಿ ಅನುದಾನವನ್ನು ನಿಗದಿತ ಉದ್ದೇಶಕ್ಕಾಗಿಯೇ ಬಳಸಿಕೊಳ್ಳಬೇಕು ಎಂದು ಮಾನ್ಯ ಮುಖ್ಯಮಂತ್ರಿಯವರ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿಗಳಾದ ಬಿ.ಬಿ.ಕಾವೇರಿ ಅವರು ಸೂಚಿಸಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಅವರು ಇಂದು ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಗೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಿಕ್ಷಣ ಇಲಾಖೆ ಸಂಬಂಧಿತ ಚರ್ಚೆ

  • ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಕೊರತೆಯನ್ನು ನೀಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
  • ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 30 ಕೊಠಡಿಗಳ ನಿರ್ಮಾಣಕ್ಕೆ ₹408 ಕೋಟಿ,
  • ವಿವೇಕ ಶಾಲಾ ಬಾಕಿ ಅನುದಾನದಲ್ಲಿ 30 ಕೊಠಡಿಗಳಿಗೆ ₹440 ಕೋಟಿ,
  • 347 ಕೊಠಡಿಗಳ ದುರಸ್ತಿಗೆ ₹474 ಕೋಟಿ,
  • ಪರಿಶಿಷ್ಟ ಜಾತಿ/ವರ್ಗ ಯೋಜನೆಯಡಿ ಕೊಠಡಿಗಳ ದುರಸ್ತಿಗೆ ₹10 ಕೋಟಿ ರೂ. ಮಂಜೂರಾಗಿದೆ.
    ಎಲ್ಲಾ ಕಾಮಗಾರಿಗಳನ್ನು ಕಾಲಮಿತಿಯಲ್ಲೇ ಪೂರ್ಣಗೊಳಿಸಲಾಗಿದೆ ಎಂದು ತಿಳಿಸಲಾಯಿತು.

ಕೃಷಿ ಮತ್ತು ತೋಟಗಾರಿಕೆ ವಿಷಯಗಳು

  • ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಅಗತ್ಯಕ್ಕಿಂತ ಹೆಚ್ಚು ಮಳೆ ಆಗಿದ್ದರೂ, ಆಗಸ್ಟ್‌ನಲ್ಲಿ -20% ಮತ್ತು ಸೆಪ್ಟೆಂಬರ್‌ನಲ್ಲಿ -32% ಮಳೆಯ ಕೊರತೆ ದಾಖಲಾಗಿದೆ.
  • ಅಡಿಕೆ ಬೆಳೆಗೆ ಮಳೆ ಹಾಗೂ ಕೊಳೆರೋಗದಿಂದ ಹಾನಿ ಸಂಭವಿಸಿರುವ ಮಾಹಿತಿ ನೀಡಲಾಗಿದ್ದು, ಬೆಳೆ ನಷ್ಟದ ಪ್ರಮಾಣವನ್ನು ತ್ವರಿತವಾಗಿ ಸಂಗ್ರಹಿಸಿ ಸರ್ಕಾರಕ್ಕೆ ಸಲ್ಲಿಸಲು ಕಾವೇರಿ ಸೂಚಿಸಿದರು.
  • ಸೊರಬ, ಸಾಗರ, ಶಿಕಾರಿಪುರ ತಾಲೂಕುಗಳಲ್ಲಿ ಜೇನುಕೃಷಿಗೆ ಅವಕಾಶಗಳು ಹೆಚ್ಚಿದ್ದು, ಅದನ್ನು ಉತ್ತೇಜಿಸಲು ಕ್ರಮ ಕೈಗೊಳ್ಳುವಂತೆ ತೋಟಗಾರಿಕೆ ಇಲಾಖೆಗೆ ಸೂಚಿಸಲಾಯಿತು.

ಆರೋಗ್ಯ ಸೌಲಭ್ಯಗಳು

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಮಾತನಾಡಿ:

  • ಶಿವಮೊಗ್ಗದಲ್ಲಿ ಜಿಲ್ಲಾ ಮಟ್ಟದ ಪ್ರತ್ಯೇಕ ಆಸ್ಪತ್ರೆ ಇಲ್ಲ,ಈಗಿರುವ ಮೆಗ್ಗಾನ್ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಿ, ಸೌಲಭ್ಯಗಳನ್ನು ಹೆಚ್ಚಿಸಲು ಬೆಂಗಳೂರು ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ಹೇಳಿದರು.

ವಿದ್ಯಾರ್ಥಿ ವಸತಿ ನಿಲಯದ ಸಮಸ್ಯೆ

ಇತರೆ ಹಿಂದುಳಿದ ವರ್ಗಗಳ ಇಲಾಖೆಯ ವ್ಯಾಪ್ತಿಯ ವಸತಿ ನಿಲಯಗಳಲ್ಲಿ ದಾಖಲಾತಿ ಪಡೆಯಲು ವಿದ್ಯಾರ್ಥಿಗಳಿಂದ ಹೆಚ್ಚಿನ ಅರ್ಜಿಗಳು ಬಂದಿರುವುದರಿಂದ ಒತ್ತಡ ಉಂಟಾಗಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕೈಗೊಳ್ಳುವಂತೆ ಜಿಲ್ಲಾ ಅಧಿಕಾರಿ ಶೋಭಾ ಅವರು ಮನವಿ ಮಾಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್. ಹೇಮಂತ್, ಪ್ರೊಬೇಷನರ್ ಜಿಲ್ಲಾಧಿಕಾರಿ ರಾಜೇಂದ್ರಬಾಬು ಸೇರಿದಂತೆ ಹಲವು ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಶಿವಮೊಗ್ಗ: 287 ಬಿಎಸ್‌ಎನ್‌ಎಲ್ ಟವರ್‌ಗಳಲ್ಲಿ 136 ಪೂರ್ಣ : ಬಿ.ವೈ. ರಾಘವೇಂದ್ರ

Leave a Comment