ಶಿವಮೊಗ್ಗ: ಸೆಪ್ಟೆಂಬರ್ 22 ರಂದು ಬೆಳಗ್ಗೆ 10ರಿಂದ ಸಂಜೆ 3ರವರೆಗೆ ವಿದ್ಯುತ್ ವ್ಯತ್ಯಯ

Written by Koushik G K

Updated on:

ಶಿವಮೊಗ್ಗ:ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೆಪ್ಟೆಂಬರ್ 22ರಂದು ತಾತ್ಕಾಲಿಕವಾಗಿ ವಿದ್ಯುತ್ ವ್ಯತ್ಯಯವಾಗಲಿದೆ. ನ.ಉ.ವಿ-2ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬೆಳಗ್ಗೆ 10.00ರಿಂದ ಸಂಜೆ 3.00ರವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ ಎಂದು ಮಸ್ಕಾಂ ಪ್ರಕಟಣೆ ತಿಳಿಸಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಈ ಅವಧಿಯಲ್ಲಿ ಪಿಯರ್‌ಲೈಟ್, ಪೇಪರ್ ಪ್ಯಾಕೇಜ್, ಕೆ.ಆರ್. ಕುಡಿಯುವ ನೀರಿನ ಸ್ಥಾವರ, ಮಂಡ್ಲಿ ಕೈಗಾರಿಕಾ ಪ್ರದೇಶ, ಸೀಗೆಹಟ್ಟಿ, ರವಿವರ್ಮ ಬೀದಿ, ಬಿ.ಬಿ.ರಸ್ತೆ, ಗಾಂಧಿಬಜಾರ್, ಬುದ್ಧನಗರ, ಆರ್.ಎಂ.ಎಲ್.ನಗರ, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, ನ್ಯೂಮಂಡ್ಲಿ, ಮಂಜುನಾಥ ಪೆಟ್ರೋಲ್ ಬಂಕ್, ವಿಜಯವಾಣಿ ಪ್ರೆಸ್ ಹತ್ತಿರ, ಎನ್.ಟಿ.ರಸ್ತೆ, ಹರಕೆರೆ, ಹಳೇಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್ ಮಿಲ್, ಬೆನಕೇಶ್ವರ ರೈಸ್ ಮಿಲ್, ಸವಾಯಿಪಾಳಯ, ಕುರುಬರ ಪಾಳ್ಯ, ಓ.ಟಿ.ರಸ್ತೆ, ಪಂಚವಟಿ ಕಾಲೋನಿ, ಗೋಪಿಶೆಟ್ಟಿಕೊಪ್ಪ, ಜಿ.ಎಸ್. ಕ್ಯಾಸ್ಟಿಂಗ್ ಫ್ಯಾಕ್ಟರಿ, ಇಲಿಯಾಜ್‌ನಗರ 1 ರಿಂದ 14ನೇ ಕ್ರಾಸ್, ಸಿದ್ದೇಶ್ವರ ಸರ್ಕಲ್, ಫಾರೂಕ್ಯ ಶಾದಿಮಹಲ್, ಚಾಲುಕ್ಯನಗರ, ಕೆಹೆಚ್‌ಬಿ ಕಾಲೋನಿ, ಮಂಡಕ್ಕಿಭಟ್ಟಿ, ತುಂಗಾನಗರ, ಅಮೀರ್ ಅಹಮದ್ ಸರ್ಕಲ್, ಟಿಪ್ಪುನಗರ, ಮಂಜುನಾಥ ಬಡಾವಣೆ, ಇಲಿಯಾಜ್‌ನಗರ ಲಾರಿ ಗ್ಯಾರೇಜ್, ಬಿಹೆಚ್ ರಸ್ತೆ, ಸಾಗರ ನರ್ಸರಿ, ಚಾನಲ್ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಇದಲ್ಲದೆ, ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಐಹೊಳೆ, ಅಗಸವಳ್ಳಿ, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್, ಹನುಮಂತಾಪುರ, ಶರಾವತಿನಗರ, ಶಾರದ ಕಾಲೋನಿ, ಗಾಜನೂರು ಗ್ರಾಮಾಂತರ ಪ್ರದೇಶ, ಹೊಸಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ವಿದ್ಯುತ್ ಸರಬರಾಜು ವ್ಯತ್ಯಯಗೊಳ್ಳಲಿದೆ.

ಮಸ್ಕಾಂ ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅಗತ್ಯ ಸಹಕಾರ ನೀಡುವಂತೆ ಮನವಿ ಮಾಡಿದೆ.

Leave a Comment