ತೀರ್ಥಹಳ್ಳಿ : ಗೋ ಕಳ್ಳತನ ಪ್ರಕರಣದ ಮೂವರು ಆರೋಪಿಗಳ ಬಂಧನ

Written by Koushik G K

Updated on:

ತೀರ್ಥಹಳ್ಳಿ ಕಳೆದ ಕೆಲವು ವಾರಗಳಿಂದ ತೀರ್ಥಹಳ್ಳಿ ತಾಲೂಕಿನ ಹಲವಾರು ಭಾಗಗಳಲ್ಲಿ ಗೋ ಕಳ್ಳತನ ಪ್ರಕರಣಗಳು ದಾಖಲಾಗುತ್ತಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿತ್ತು. ವಿಶೇಷವಾಗಿ, ಕಾರಿನಲ್ಲಿ ಗೋವುಗಳನ್ನು ತುಂಬಿಕೊಂಡು ಸಾಗಿಸುತ್ತಿರುವ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದವು. ಇದರಿಂದ ಬಿಜೆಪಿ ವತಿಯಿಂದ ಪ್ರತಿಭಟನೆ ಸಹ ನಡೆದಿತ್ತು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಈ ಹಿನ್ನೆಲೆಯಲ್ಲಿ, ಪ್ರಕರಣದ ತನಿಖೆ ತೀವ್ರಗೊಳಿಸಿದ ತೀರ್ಥಹಳ್ಳಿ ಪೊಲೀಸರು, ಪಟ್ಟಣದ ಬೆಟ್ಟಮಕ್ಕಿಯ ಭೂತರಾಯನಕಟ್ಟೆ ಬಳಿ ಗೋ ಕಳ್ಳತನ ಮಾಡಲು ಬಂದಿದ್ದ ಮೂವರನ್ನು ಸಿಕ್ಕಿಬಿದ್ದರು.

ಬಂಧಿತರಲ್ಲಿ ಶಿವಮೊಗ್ಗ ಮೂಲದ ಮೌಸಿನ್ ಖಾನ್, ಲಿಂಗಾಪುರದ ಮಹಮದ್ ಮುಸ್ತಾಕ್ ಮತ್ತು ಶಿರಾಜ್ ಉದ್ದಿನ್ ಎಂಬವರು ಸೇರಿದ್ದಾರೆ. ಪೊಲೀಸರು ಆರೋಪಿಗಳಿಂದ ಓಮಿನಿ ಕಾರು ಹಾಗೂ ಕಳ್ಳತನಕ್ಕೆ ಬಳಸಿದ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.

ತನಿಖೆಯಿಂದ ತಿಳಿದುಬಂದಂತೆ, ಈ ಕಳ್ಳರು ರಾತ್ರಿ ವೇಳೆ ರಸ್ತೆ ಬದಿಯಲ್ಲಿ ಮಲಗಿದ್ದ ಜಾನುವಾರುಗಳನ್ನು ಹಿಡಿದು ಕಾರಿನಲ್ಲಿ ತುಂಬಿಕೊಂಡು ಶಿವಮೊಗ್ಗಕ್ಕೆ ಸಾಗಿಸುತ್ತಿದ್ದರು. ನಂತರ ಅವುಗಳನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕಾರ್ಯಾಚರಣೆಯನ್ನು ಡಿ.ವೈ.ಎಸ್.ಪಿ ಅರವಿಂದ್ ಕಲಗುಜ್ಜಿ ಹಾಗೂ ಇನ್ಸ್ಪೆಕ್ಟರ್ ಇಮ್ರಾನ್ ಬೇಗ್ ಅವರ ನೇತೃತ್ವದಲ್ಲಿ ತಂಡ ನಡೆಸಿದ್ದು, ಮಿಂಚಿನ ಕಾರ್ಯಾಚರಣೆಯಲ್ಲಿ ಮೂವರನ್ನೂ ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಬಂಧಿತರಿಂದ ಹೆಚ್ಚಿನ ಮಾಹಿತಿ ಪಡೆಯಲು ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ. ಈ ಬಂಧನದಿಂದ ತೀರ್ಥಹಳ್ಳಿಯಲ್ಲಿನ ಗೋ ಕಳ್ಳತನ ಪ್ರಕರಣಗಳಿಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿವಮೊಗ್ಗ ಜೈಲಿನ ವಿಚಾರಣಾಧೀನ ಕೈದಿ ಅನಾರೋಗ್ಯದಿಂದ ಸಾವು !

Leave a Comment