ಹೊಸನಗರ ; 2025-26ನೇ ಸಾಲಿನ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ತಾಲ್ಲೂಕು ಮಟ್ಟದ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಹೊಸನಗರದ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಸಚಿನ್ ಹೆಗಡೆ ತಿಳಿಸಿದರು.
ತಾಲ್ಲೂಕಿನ 5 ಜನ ಪ್ರಗತಿಪರ ರೈತರನ್ನು ಆಯ್ಕೆ ಮಾಡಿ ಆಯ್ಕೆಯಾದವರಿಗೆ ಕೃಷಿ ಇಲಾಖೆಯ ವತಿಯಿಂದ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು ಎಂದರು.
ಅರ್ಜಿ ಸಲ್ಲಿಸುವ ರೈತರು ಕೃಷಿಯಲ್ಲಿ ಸಮಗ್ರ ಬೆಳೆ ಪದ್ದತಿ, ಸಮಗ್ರ ನೀರು ನಿರ್ವಹಣೆ, ಸಾವಯುವ ಕೃಷಿ ಅಭಿವೃದ್ಧಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಮೀನುಗಾರಿಕೆ, ರೇಷ್ಮೆ ಸಂಸ್ಕರಣೆ, ಅರಣ್ಯ ಕೃಷಿ ಸೇರಿದಂತೆ ಇತರೆ ಕೃಷಿ ಚಟುವಟಿಕೆಗಳಲ್ಲಿ ಸಂಶೋಧನೆ ಅಥವಾ ಉತ್ತಮ ಸಾಧನೆ ಮಾಡಿರಬೇಕು ಎಂದರು.
ಹೊಸನಗರದ ಕೃಷಿ ಇಲಖೆಯಿಂದ ಅರ್ಜಿ ಪಡೆದು ಅಗತ್ಯ ಮಾಹಿತಿಗಳಾದ ಆಧಾರ್ ಕಾರ್ಡ್, ಪಾಸ್ ಪುಸ್ತಕ, ಪಹಣಿ ಪ್ರತಿಗಳನ್ನು ಮತ್ತು ಸೂಕ್ತ ಛಾಯಾಚಿತ್ರದೊಂದಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್ 15 ಕೊನೆಯ ದಿನವಾಗಿದ್ದು ಹೆಚ್ಚಿನ ಮಾಹಿತಿಯನ್ನು ಆತ್ಮ ಸಿಬ್ಬಂದಿ ಅಥವಾ ತಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸುವಂತೆ ಕೇಳಿಕೊಂಡಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.