ಶಾಲೆಗಳಿಗೆ ದಸರಾ ರಜೆ ವಿಸ್ತರಣೆ ; ಎಲ್ಲಿಯವರೆಗೆ ರಜೆ ?

Written by Mahesha Hindlemane

Updated on:

ಬೆಂಗಳೂರು ; ರಾಜ್ಯದಲ್ಲಿ ಸಾಮಾಜಿಕ, ಆರ್ಥಿಕ ಸಮೀಕ್ಷೆ ಕಾಲಮಿತಿಯಲ್ಲಿ ಪೂರ್ಣವಾಗಿಲ್ಲ. ಹೀಗಾಗಿ ಶಿಕ್ಷಕರನ್ನು ಸಮೀಕ್ಷೆ ಕಾರ್ಯಕ್ಕೆ ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಲು ಶಾಲೆಗಳ ದಸರಾ ರಜೆ ಅವಧಿಯನ್ನು ಅಕ್ಟೋಬರ್ 18ರವರೆಗೆ ವಿಸ್ತರಿಸಲಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ರಾಜ್ಯದಲ್ಲಿ ಅಕ್ಟೋಬರ್ 18ರವರೆಗೆ ಶಾಲೆಗಳ ದಸರಾ ರಜೆ ವಿಸ್ತರಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.

ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಗೆ ಶಿಕ್ಷಕರನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಲು ಶಾಲೆಗಳ ದಸರಾ ರಜೆಯನ್ನು ಆಕ್ಟೋಬರ್ 18ರವರೆಗೆ ವಿಸ್ತರಿಸಲಾಗಿದೆ. ರಾಜ್ಯ ಸರ್ಕಾರಿ ನೌಕರರ ಸಂಘ ಕೂಡ ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿತ್ತು.

ಶಿಕ್ಷಕರನ್ನು ಅರ್ಧ ದಿನ ಸಮೀಕ್ಷೆ, ಅರ್ಧ ದಿನ ಶಾಲೆಗಳಲ್ಲಿ ಪಾಠ ಬೋಧನೆಗೆ ಬಳಕೆಯಿಂದ ಯಾವುದಕ್ಕೂ ನ್ಯಾಯ ನೀಡಲು ಆಗಲ್ಲ. ಹೀಗಾಗಿ ಪೂರ್ಣ ಪ್ರಮಾಣದಲ್ಲಿ ಶಾಲಾ ಶಿಕ್ಷಕರನ್ನು ಸಮೀಕ್ಷೆಗೆ ಬಳಕೆ ಮಾಡಲು ಅಕ್ಟೋಬರ್ 18ರವರೆಗೆ ಶಾಲೆಗಳ ದಸರಾ ರಜೆ ವಿಸ್ತರಿಸಲಾಗಿದೆ.

ಈ ಸರ್ವೆಗೆ ಹಿಂದೇಟು ಹಾಕುವವರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳುತ್ತೇವೆ. ಸಮೀಕ್ಷೆಯಲ್ಲಿ 1.20 ಲಕ್ಷ ಶಿಕ್ಷಕರು ಭಾಗಿಯಾಗಿದ್ದಾರೆ. ಸದ್ಯದ ಮಟ್ಟಿಗೆ ಪಿಯುಸಿ ಉಪನ್ಯಾಸಕರು ಸರ್ವೇಯಲ್ಲಿ ಭಾಗಿಯಾಗುವಂತಿಲ್ಲ. ಈಗ ನೀಡಿರುವ ಸಮಯದೊಳಗೆ ಸಮೀಕ್ಷೆಯನ್ನು ಮುಗಿಸಿಕೊಡಲು ಸ್ಪಷ್ಟಪಡಿಸಿದ್ದೇವೆ ಎಂದು ಸಿಎಂ ಹೇಳಿದರು.

Leave a Comment