ಮಣಿಪಾಲ ಆರೋಗ್ಯ ಕಾರ್ಡ್‌ನ ರಜತ ಮಹೋತ್ಸವ | ಮಣಿಪಾಲ ಆರೋಗ್ಯ ಕಾರ್ಡ್ 2025ರ ನೋಂದಣಿ ಪ್ರಾರಂಭ

Written by Mahesha Hindlemane

Published on:

ರಿಪ್ಪನ್‌ಪೇಟೆ ; ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ ) ಮಣಿಪಾಲವು ಕರ್ನಾಟಕ ಮತ್ತು ನೆರೆಯ ರಾಜ್ಯಗಳಾದ್ಯಂತ ಲಕ್ಷಾಂತರ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆಯನ್ನು ಒದಗಿಸುತ್ತಿರುವ ಮಣಿಪಾಲ ಆರೋಗ್ಯ ಕಾರ್ಡ್ 2025 ರ ನೋಂದಣಿ ಪ್ರಾರಂಭಿಸಿರುವುದಾಗಿ, ಮಾಹೆ ಮಣಿಪಾಲದ ಸಹ ಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳರು ಘೋಷಿಸಿದ್ದಾರೆ. ಈ ಮೂಲಕ ಗ್ರಾಮೀಣ ಭಾರತಕ್ಕೆ ಆರೋಗ್ಯ ಸೇವೆ ಲಭ್ಯವಾಗುವಂತೆ ಮಾಡುವ ಧ್ಯೇಯವನ್ನು ಹೊಂದಿದ್ದ ಮಣಿಪಾಲ ಸಂಸ್ಥೆಯ ಸಂಸ್ಥಾಪಕ ಡಾ. ಟಿ.ಎಂ.ಎ. ಪೈ ಅವರ ದೂರದೃಷ್ಟಿಯ ನಾಯಕತ್ವವನ್ನು ನೆನಪಿಸಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

“ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರ ಮಾರ್ಗದರ್ಶನದಲ್ಲಿ 2000 ರಲ್ಲಿ ಪ್ರಾರಂಭಿಸಲಾದ ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆಯು ಈಗ ರಜತ ಮಹೋತ್ಸವದ ಮೈಲಿಗಲ್ಲನ್ನು ತಲುಪಿದೆ. 25 ವರ್ಷಗಳಲ್ಲಿ, ಇದು ಕೋಟ್ಯಂತರ ಫಲಾನುಭವಿಗಳ ಜೀವನವನ್ನು ಮುಟ್ಟಿದೆ ಎಂದಿದ್ದಾರೆ.

2000ನೇ ಇಸವಿಯಲ್ಲಿ 3,200 ಕುಟುಂಬಗಳು ಮಣಿಪಾಲ ಆರೋಗ್ಯಕಾರ್ಡ್ ಯೋಜನೆಯಡಿ ನೋಂದಣಿ ಮಾಡಿದ್ದರು. ಕಳೆದ ಹಣಕಾಸು ವರ್ಷದಲ್ಲಿ ನಾವು 1.25 ಲಕ್ಷ ಕುಟುಂಬಗಳು ಈ ಯೋಜನೆಗಳ ಅಡಿಯಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ ಮತ್ತು ನಾವು ಈ ಯೋಜನೆಯಡಿಯಲ್ಲಿ 6.72 ಲಕ್ಷ ಸದಸ್ಯರನ್ನು ಹೊಂದಿದ್ದೇವೆ. ಕರ್ನಾಟಕ ಮತ್ತು ನೆರೆಯ ರಾಜ್ಯಗಳಾದ್ಯಂತ ಲಕ್ಷಾಂತರ ಕುಟುಂಬಗಳಿಗೆ ಪ್ರಯೋಜನವನ್ನು ನೀಡುತ್ತಿದೆ.

ಒಂದು ವರ್ಷ ಮತ್ತು ಎರಡು ವರ್ಷಗಳ ಸದಸ್ಯತ್ವ ಆಯ್ಕೆಗಳನ್ನು ನೀಡುತ್ತಿದ್ದೇವೆ. ಬೆಲೆಯು ಸಮಾಜದ ಎಲ್ಲಾ ವರ್ಗಗಳಿಗೆ ಕೈಗೆಟುಕುವಿಕೆಯನ್ನು ಖಚಿತಪಡಿಸುತ್ತದೆ. ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ, ಯಾರಾದರೂ ಸದಸ್ಯರಾಗಬಹುದು ಮತ್ತು ಪ್ರಯೋಜನಗಳನ್ನು ಪಡೆಯಬಹುದು. “ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ” ಎಂಬುದು ಮಣಿಪಾಲ್ ಆರೋಗ್ಯ ಕಾರ್ಡ್‌ನ ದ್ಯೇಯ ವಾಕ್ಯ.
– ಡಾ. ಅವಿನಾಶ್ ಶೆಟ್ಟಿ, ವೈದ್ಯಕೀಯ ಅಧೀಕ್ಷಕ

ಸದಸ್ಯತ್ವ ವಿವರಗಳು :

ಮಣಿಪಾಲ ಆರೋಗ್ಯ ಕಾರ್ಡ್ 2025ರ ಯೋಜನೆಯು “ಒಂದು ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ₹ 350, ಕೌಟಂಬಿಕ ಕಾರ್ಡ್ ಅಂದರೆ ಕಾರ್ಡ್‌ದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ ₹ 700 ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ₹ 900. ಇದೊಂದು ಹೆಚ್ಚುವರಿ ಲಾಭವಾಗಿದೆ. 2 ವರ್ಷದ ಯೋಜನೆಯಲ್ಲಿ ಒಬ್ಬರಿಗೆ ₹ 600, ಕುಟುಂಬಕ್ಕೆ ₹ 950 ಮತ್ತು ಕೌಟಂಬಿಕ ಪ್ಲಸ್ ಯೋಜನೆಗೆ ₹ 1100 ಆಗಿರುತ್ತದೆ.

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಕಾರ್ಡ್‌ದಾರರಿಗೆ ರಿಯಾಯಿತಿ ಪ್ರಯೋಜನಗಳು:

  • ತಜ್ಞ ಮತ್ತು ಸೂಪರ್-ಸ್ಪೆಷಲಿಸ್ಟ್ ಸಮಾಲೋಚನೆ ಶುಲ್ಕಗಳಲ್ಲಿ 50% ರಿಯಾಯಿತಿ (ಓ ಪಿ ಡಿ ದಿನಗಳು).
  • ರೋಗನಿರ್ಣಯ ಮತ್ತು ಪ್ರಯೋಗಾಲಯ ಪರೀಕ್ಷೆಗಳ ಮೇಲೆ 25% ರಿಯಾಯಿತಿ.
  • ರೇಡಿಯಾಲಜಿ, ಓ ಪಿ ಡಿ ಕಾರ್ಯವಿಧಾನಗಳು ಮತ್ತು ಮಧುಮೇಹ ಪಾದದ ಆರೈಕೆಯ ಮೇಲೆ 20% ರಿಯಾಯಿತಿ.
  • ಡಯಾಲಿಸಿಸ್‌ನಲ್ಲಿ ₹100 ರಿಯಾಯಿತಿ.
  • ಆಸ್ಪತ್ರೆ ಔಷಧಿಗಳ ಮೇಲೆ 10% ವರೆಗೆ ರಿಯಾಯಿತಿ.
  • ಸಾಮಾನ್ಯ ವಾರ್ಡ್ ಒಳರೋಗಿಗಳ ಬಿಲ್‌ಗಳಲ್ಲಿ 25% ರಿಯಾಯಿತಿ (ಉಪಭೋಗ್ಯ ವಸ್ತುಗಳು ಮತ್ತು ಪ್ಯಾಕೇಜ್‌ಗಳನ್ನು ಹೊರತುಪಡಿಸಿ) ನೀಡಲಾಗುತ್ತದೆ ಎಂದಿದ್ದಾರೆ.

ಕಾರ್ಡ್‌ದಾರರು ಕಸ್ತೂರ್ಬಾ ಆಸ್ಪತ್ರೆ-ಮಣಿಪಾಲ, ಡಾ.ಟಿಎಂಎ ಪೈ ಆಸ್ಪತ್ರೆ-ಉಡುಪಿ, ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆ-ಕಾರ್ಕಳ, ಕೆಎಂಸಿ ಆಸ್ಪತ್ರೆ-ಮಂಗಳೂರು ಮತ್ತು ಅತ್ತಾವರ, ದುರ್ಗಾ ಸಂಜೀವನಿ ಮಣಿಪಾಲ ಆಸ್ಪತ್ರೆ-ಕಟೀಲು, ಮಣಿಪಾಲ ಆಸ್ಪತ್ರೆ-ಗೋವಾ ಮತ್ತು ಮಣಿಪಾಲ ಹಾಗೂ ಮಂಗಳೂರಿನಲ್ಲಿನ ದಂತ ಕಾಲೇಜುಗಳಲ್ಲಿ ಪ್ರಯೋಜನಗಳನ್ನು ಪಡೆಯಬಹುದು. ಮಣಿಪಾಲ ಮತ್ತು ಮಂಗಳೂರಿನಲ್ಲಿ ಇತರ ಆಸ್ಪತ್ರೆಗಳಲ್ಲಿನ ರಿಯಾಯಿತಿಗಳು ಮತ್ತು ಹೆಚ್ಚಿನ ಮಾಹಿತಿಗಾಗಿ, www.manipalhealthcard.com ಗೆ ಭೇಟಿ ನೀಡಿ ಅಥವಾ 9980854700 / 08202923748 ಅನ್ನು ಸಂಪರ್ಕಿಸಿ. ಎಲ್ಲಾ ನಮ್ಮ ಅಧಿಕೃತ ಪ್ರತಿನಿಧಿಗಳ ಮೂಲಕ ನೋಂದಣಿ ಮಾಡಬಹುದು.

ಪತ್ರಿಕಾಗೋಷ್ಟಿಯಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕರಾದ ಮೋಹನ್ ಶೆಟ್ಟಿ ಹಾಗೂ ಪ್ರತಿನಿಧಿಯಾದ ಅನಿಲ್ ಮತ್ತಿತರರು ಉಪಸ್ಥಿತರಿದ್ದರು.

2025ರ ನೋಂದಾವಣಿಗಾಗಿ ಅರ್ಜಿಗಳು ಕೆಳಕಂಡ ಅಧಿಕೃತ ಪ್ರತಿನಿಧಿಗಳ ಬಳಿ ಲಭ್ಯವಿದೆ:

  • ಶ್ರೀಕಂಠ – 9483016851
  • ಶಾಂತಮೂರ್ತಿ – 9448787820
  • ಷಣ್ಮುಖಪ್ಪ – 9591866656
  • ಕೃಷ್ಣಮೂರ್ತಿ – 8762148359
  • ಶಾರದ ವಿವಿಧೋದ್ದೇಶ ಸಹಕಾರಿ ನಿಯಮಿತ –  9480285636
  • ಪಿಯೂಸ್ ರೊಡ್ರಿಗಸ್ – 9448914656
  • ಬಾಲಕೃಷ್ಣ ಬಿ ಕೆ – 9448914636
  • ಸುಕೇಶ್ ಕುಮಾರ್ – 9481308538
  • ತಸ್ವೀರ್ ಅಹಮದ್ – 8277789762

Leave a Comment