SHIVAMOGGA | ನಗರದ ಬ್ರೈಟ್ ಹೋಟೆಲ್‌ನಲ್ಲಿ (Hotel) ಗ್ರಾಹಕ ಬಿಟ್ಟು ಹೋದ 4 ಲಕ್ಷ ರೂ. ಇದ್ದ ಹಣದ ಚೀಲವನ್ನು (Money Bag) ಅಲ್ಲಿನ ಸರ್ವರ್ ಎತ್ತಿಕೊಂಡು ಹೋದ ಘಟನೆ ಸಂಭವಿಸಿದ್ದು, ಆತನನ್ನು ಬಂಧಿಸಿ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಾಗರ ತಾಲೂಕು ಜಂಬಾನಿ ಗ್ರಾಮದ ವಾಸಿ ಲೋಕೇಶ್ ಎನ್ನುವವರು ತನ್ನ ಸ್ನೇಹಿತನೊಂದಿಗೆ ಹೋಟೆಲ್‌ನಲ್ಲಿ ಊಟ ಮಾಡುತ್ತಿದ್ದಾಗ 4 ಲಕ್ಷ ರೂ. ಇದ್ದ ಚೀಲವನ್ನು ಟೇಬಲ್ ಮೇಲೆ ಇಟ್ಟಿದ್ದರು. ಅವರಸರಲ್ಲಿ ಚೀಲವನ್ನು ಅಲ್ಲಿಯೇ ಬಿಟ್ಟು ಹೋಗಿದ್ದರು. ಸ್ವಲ್ಪ ಸಮಯದ ನಂತರ ಕಾರಿನಲ್ಲಿ ಬ್ಯಾಗ್ ಇಲ್ಲದೇ ಇರುವುದು ಕಂಡುಬಂದಿದ್ದು, ವಾಪಾಸ್ ಹೋಟೆಲ್‌ಗೆ ಬಂದು ಸಿಸಿ ಕ್ಯಾಮೆರಾ ಪರಿಶೀಲನೆ ಮಾಡಿದಾಗ ಹೋಟೆಲ್‌ನಲ್ಲಿ ಸರ್ವರ್ ಕೆಲಸ ಮಾಡುವ ಹೇಮಂತ್ ಕುಮಾರ್ ಎಂಬುವವನು ಬ್ಯಾಗ್ ಅನ್ನು ತೆಗೆದು ನೋಡಿ ಸ್ಟೋರ್ ರೂಮಿನಲ್ಲಿ ಇಡುವ ದೃಶ್ಯಾವಳಿ ಕಂಡು ಬಂದಿತು.
ಫೋನ್ ಮಾಡಿ ಆತನಿಗೆ ಹಣದ ಬ್ಯಾಗ್ ನ ಬಗ್ಗೆ ವಿಚಾರ ಮಾಡಿದಾಗ ಯಾವುದೇ ಬ್ಯಾಗ್, ನಗದು ಹಣ ನಾನು ತೆಗೆದುಕೊಂಡಿಲ್ಲವೆಂದು ಹೇಳಿ ಫೋನ್ ಕಟ್ ಮಾಡಿದ್ದನು. ಅಲ್ಲದೆ ಬೆಳಿಗ್ಗೆ ಹೋಟೆಲ್‌ನ ಕೆಲಸಕ್ಕೂ ಕೂಡ ಬಂದಿರಲಿಲ್ಲ. ಆದ್ದರಿಂದ ನಗದು ಹಣ ಕಳ್ಳತನ ಮಾಡಿಕೊಂಡು ಹೋದ ಹೇಮಂತ್ ಕುಮಾರ್ ಮೇಲೆ ಪ್ರಕರಣ ದಾಖಲಿಸಿದ್ದರು.
ಪೊಲೀಸರ ತಂಡವು ತಂಡವು ಪ್ರಕರಣದ ಆರೋಪಿತ ಹೇಮಂತ್ ಕುಮಾರ್ ಅಲಿಯಾಸ್ ಹೇಮಂತ್ (40) ಈತ ವಾಸವಿರುವ ಅಶೋಕ ನಗರದ ಮನೆಗೆ ತೆರಳಿ ಬಂಧಿಸಿ ಆತನಿಂದ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.
Read More
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಗೆಲುವು ಸೈದ್ಧಾಂತಿಕ ಗೆಲುವಲ್ಲ ; ಮಾಜಿ ಸಚಿವ ಕಿಮ್ಮನೆ ರತ್ನಾಕರ್