ಅಜ್ಜಂಪುರ

ನಾಳೆ ಹಸೆಮಣೆ ಏರಬೇಕಿದ್ದ ವಧು ಹೃದಯಾಘಾತಕ್ಕೆ ಬಲಿ ; ಶೋಕದಲ್ಲಿ ಮುಳುಗಿದ ಸಂಭ್ರಮದ ಮನೆ

ಅಜ್ಜಂಪುರ ; ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಸೊಲ್ಲಾಪುರ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ನಾಳೆ ಹಸೆಮಣೆ ಏರಬೇಕಿದ್ದ ಯುವತಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ. 

ಶೃತಿ (24) ಮೃತ ಮದುಮಗಳು. ಶೃತಿ ನಾಳೆ ಸಪ್ತಪದಿ ತುಳಿದು ಹೊಸ ಬಾಳಿಗೆ ಕಾಲಿಡಲಿದ್ದಳು. ಮದುವೆ ಖುಷಿಯಲ್ಲಿದ್ದ ಶೃತಿಗೆ ಲೋ ಬಿಪಿ ಕಾಣಿಸಿಕೊಂಡು ಕುಸಿದು ಬಿದ್ದಿದ್ದಾಳೆ. ಕೂಡಲೇ ಆಕೆಯನ್ನು ಸ್ಥಳೀಯರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಪ್ರಾಣ ಕಳೆದುಕೊಂಡಿದ್ದಾಳೆ. 

inshot_20251030_1537125622079758410080286948.jpg

ತರೀಕೆರೆ ಮೂಲದ ಯುವಕ ದಿಲೀಪ್ ಜೊತೆ ಮದುವೆ ನಿಶ್ಚಯವಾಗಿತ್ತು. ಸಂಭ್ರಮದಲ್ಲಿದ್ದ ಮದುವೆ ಮನೆ ಈಗ ಶೋಕ ಸಾಗರದಲ್ಲಿ ಮುಳುಗಿದೆ. ಮಗಳನ್ನು ಕಳೆದುಕೊಂಡ ಪೋಷಕರು ಕಂಗಾಲಾಗಿದ್ದಾರೆ. ಅಲ್ಲದೇ ಮದುವೆ ಮೂಲಕ ಹೊಸ ಬದುಕಿನ ಕನಸು ಕಂಡಿದ್ದ ವರ ಆಘಾತಕ್ಕೆ ಒಳಗಾಗಿದ್ದಾನೆ. ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Comment