ಶಿವಮೊಗ್ಗ ; ಅಕ್ರಮವಾಗಿ ಕಪ್ಪು ಆಮೆ ಸಂಗ್ರಹಿಸಿಟ್ಟುಕೊಂಡಿದ್ದಾರೆಂಬ ಖಚಿತ ಮಾಹಿತಿಯನ್ನಾದರಿಸಿ ಅರಣ್ಯ ಸಂಚಾರಿ ದಳ ಸಾಗರದ ಪಿಎಸ್ಐ ವಿನಾಯಕ ನೇತೃತ್ವದಲ್ಲಿ ಸಿಬ್ಬಂದಿವರ್ಗ ದಿಢೀರ್ ದಾಳಿ ನಡೆಸಿ ಆಮೆಯನ್ನು ವಶಪಡಿಸಿಕೊಂಡ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಶಿವಮೊಗ್ಗ ನಗರದ ಬೆಕಲ್ಲು ಸಿದ್ದೇಶ್ವರ ನಗರದಲ್ಲಿನ ಮನೆಯೊಂದರಲ್ಲಿ ಅಕ್ರಮವಾಗಿ ಕಪ್ಪು ಅಮೆಯನ್ನು ಸಂಗ್ರಹಿಸಿಟ್ಟುಕೊಂಡಿದ್ದಾರೆಂಬ ಮಾಹಿತಿಯನ್ನಾದರಿ ಅರಣ್ಯ ಸಂಚಾರಿ ದಳ ಸಾಗರದ ಪಿಎಸ್ಐ ವಿನಾಯಕ ನೇತೃತ್ವದಲ್ಲಿ ಸಂಚಾರಿದಳದ ಸಿಬ್ಬಂದಿವರ್ಗ ದಿಢೀರ್ ದಾಳಿ ನಡೆಸಿ ಮಹಮ್ಮದ್ ಸಮೀಯುಲ್ಲಾ ಬಿನ್ ಹಮೀದ್ ಎಂಬ ಆರೋಪಿಯನ್ನು ಬಂಧಿಸಿ ಆಮೆಯನ್ನು ವಶಪಡಿಸಿಕೊಳ್ಳುವುದರೊಂದಿಗೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





