ಶೃಂಗೇರಿ : ಚಿಕ್ಕಮಗಳೂರು ಜಿಲ್ಲೆಯ ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ಶುಕ್ರವಾರ ಮುಂಜಾನೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ಇಬ್ಬರು ರೈತರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.
ತಾಲೂಕಿನ ಕೆರೆಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಡುಬಾ ಎಲ್ಸಾರ ಸಮೀಪ ಈ ಘಟನೆ ನಡೆದಿದೆ.
ಮೃತರನ್ನು ಹರೀಶ್ ಮತ್ತು ಉಮೇಶ್ ಎಂದು ಗುರುತಿಸಲಾಗಿದೆ. ಇಬ್ಬರು ಹಸುವಿನ ಕೊಟ್ಟಿಗೆಗೆ ಸೊಪ್ಪು ತರುವುದಕ್ಕಾಗಿ ಸಮೀಪದ ಅರಣ್ಯ ಪ್ರದೇಶಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ಎದುರಾದ ಕಾಡಾನೆ, ಇಬ್ಬರ ಮೇಲೂ ದಾಳಿ ನಡೆಸಿ ಅವರನ್ನು ಕೊಂದುಹಾಕಿದೆ ಎಂದು ತಿಳಿದುಬಂದಿದೆ.
ಈ ಘಟನೆಯಿಂದಾಗಿ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.
 
			




