Kadur | ಚಲಿಸುತ್ತಿದ್ದ ಕಾರಿ (Car)ನಲ್ಲಿ ಏಕಾಏಕಿ ಬೆಂಕಿ (Fire) ಕಾಣಿಸಿಕೊಂಡು ಸುಟ್ಟು ಕರಕಲಾಗಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಡೂರು ತಾಲೂಕಿನ ಸರಸ್ವತಿಪುರ ಗೇಟ್ ಬಳಿ ಶನಿವಾರ ನಡೆದಿದೆ.
ಚಿಕ್ಕಮಗಳೂರಿನಿಂದ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಸರಸ್ವತಿಪುರ ಗೇಟ್ ತಲುಪುತ್ತಿದ್ದಂತೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ಕೂಡಲೇ ಎಚ್ಚೆತ್ತ ಚಾಲಕ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾನೆ ಈ ವೇಳೆ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಕಾರಿನಿಂದ ಹೊರ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ.

ಪ್ರಯಾಣಿಕರು ಹೊರಬಂದ ಕೆಲವೇ ಹೊತ್ತಿನಲ್ಲಿ ಇಡೀ ಕಾರು ಬೆಂಕಿಗಾಹುತಿಯಾಗಿದ್ದು, ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಕಡೂರು ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಾಗಲೇ ಕಾರು ಸಂಪೂರ್ಣ ಸುಟ್ಟು ಕರಕಲಾಗಿತ್ತು.

ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ.
Read More :Accident | ಕಾರು ಮತ್ತು ಓಮ್ನಿ ನಡುವೆ ಭೀಕರ ಅಪಘಾತ, ಓರ್ವ ಸ್ಥಳದಲ್ಲಿಯೇ ಸಾವು !

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.