ಹೊಸನಗರ ; ಇತ್ತೀಚಿಗೆ ತಾಲೂಕಿನ ಕಸಬಾ ಹೋಬಳಿ ನಿಟ್ಟೂರಿನಲ್ಲಿ ವಿವಿಧ ಕ್ಷೇತ್ರದಲ್ಲಿ ರಾಜ್ಯ ಹಾಗು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನಿಸಲಾಯಿತು.
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾದ ರಾಜ್ಯ ಕಾರ್ಯಕಾರಿ ಸಮಿತಿಗೆ ನೂತನ ನಿರ್ದೇಶಕರಾಗಿ ಆಯ್ಕೆಯಾದ ಎನ್.ಎಸ್. ರವಿಕುಮಾರ್ (ರವೀಶ್), ತಾಲೂಕು ಕಾಂಗ್ರೆಸ್ ಘಟಕಕ್ಕೆ ಉಪಾಧ್ಯಕ್ಷರಾಗಿ ಆಯ್ಕೆಯಾದ ನಾಗೋಡಿ ವಿಶ್ವನಾಥ್, ಕಾರ್ಯದರ್ಶಿ ಚಂದಯ್ಯ ಜೈನ್, ಪ್ರಾಥಮಿಕ ಶಾಲಾ ಅಧ್ಯಕ್ಷರಾಗಿ ಆಯ್ಕೆಯಾದ ಬೆಣ್ಣಟ್ಟೆ ಮಂಜಪ್ಪ ಇವರನ್ನು ಹೊಸನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ, ನಿಟ್ಟೂರು ಕಾಂಗ್ರೆಸ್ ಘಟಕದ ಅಧ್ಯಕ್ಷ ನಾಗೇಂದ್ರ ಜೋಗಿ ಅಧ್ಯಕ್ಷತೆಯಲ್ಲಿ ಸನ್ಮಾನಿಸಲಾಯಿತು.
ಈ ಸನ್ಮಾನವು ಪಕ್ಷ ಸಂಘಟನೆಯ ಜವಾಬ್ದಾರಿಯನ್ನು ಹೆಚ್ಚಿಸಿದ್ದು, ಮುಂಬರುವ ದಿನಗಳಲ್ಲಿ ಬ್ರಾಹ್ಮಣ ಸಮುದಾಯ ಕಾಂಗ್ರೆಸ್ ಪರ ನಿಲ್ಲುವಂತೆ ತಾವು ಶಕ್ತಿ ಮೀರಿ ಪ್ರಯತ್ನ ಮಾಡುವ ಭರವಸೆ ನೀಡಿದರು.
ಈ ವೇಳೆ ಕಾಂಗ್ರೆಸ್ ಪಕ್ಷದ ಜಿಲ್ಲಾ ಮುಖಂಡ ಮಾಸ್ತಿಕಟ್ಟೆ ಸುಬ್ರಮಣ್ಯ, ಶಾಸಕ ಬೇಳೂರು ಗೋಪಾಲಕೃಷ್ಣ ಆಪ್ತ ಸಹಾಯಕ ಸಣ್ಣಕ್ಕಿ ಮಂಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





