ಹೊಸನಗರ ; ಗಾಂಜಾ ಸೇವನೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪಟ್ಟಣದ ಪೊಲೀಸರು ಗಸ್ತಿನಲ್ಲಿದ್ದಾಗ ತಾಲೂಕಿನ ಕಚ್ಚಿಗೆಬೈಲು ಗ್ರಾಮದಲ್ಲಿ ಸುಬ್ರಮಣ್ಯ (26) ಎಂಬಾತ ಮಾದಕ ವಸ್ತು ಸೇವನೆ ಮಾಡಿದಂತೆ ಕಂಡುಬಂದಿದ್ದು, ವಿಚಾರಣೆ ಮಾಡಿದಾಗ ತಾನು ಗಾಂಜಾ ಸೇವಿಸಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ.
ಸರ್ಕಲ್ ಇನ್ಸ್ಪೆಕ್ಟರ್ ಗೌಡಪ್ಪಗೌಡರ್ ಆದೇಶದ ಮೇರೆಗೆ ಸಬ್ ಇನ್ಸ್ಪೆಕ್ಟರ್ ಶಂಕರಗೌಡ ಪಾಟೀಲ್ರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಗಳಿಗೆ ಆರೋಪಿ ಸಿಕ್ಕಿದ್ದು ಬಳಿಕ ವೈದ್ಯಕೀಯ ತಪಾಸಣೆಯಲ್ಲಿ ಆತ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈತನ ವಿರುದ್ಧ ಎನ್ಡಿಪಿಎಸ್ ಆಕ್ಟ್ 27(ಬಿ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





