ಎನ್.ಆರ್.ಪುರ ; ಮಹಿಳೆಯೊಬ್ಬರನ್ನು ಆಕೆಯ ಪುತ್ರಿಯೇ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಂಡಿಮಠ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿರುವುದಾಗಿ ವರದಿಯಾಗಿದೆ.
ಕುಸುಮಾ (62) ಹತ್ಯೆಯಾದ ಮಹಿಳೆ. ಸುಧಾ (35) ಹತ್ಯೆ ಮಾಡಿದ ಆರೋಪಿ ಎಂದು ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ.

ಮೂಲತಃ ಹಾವೇರಿ ಜಿಲ್ಲೆಯವರಾದ ಕುಸುಮ ಬಹಳ ವರ್ಷಗಳ ಹಿಂದೆಯೇ ಬಾಳೆಹೊನ್ನೂರಿನ ಕಾಫಿ ತೋಟದಲ್ಲಿ ಕೆಲಸ ಮಾಡಿಕೊಂಡು ಇಲ್ಲೇ ವಾಸವಿದ್ದರು. ಮೃತ ಕುಸುಮಾಗೆ ಮಕ್ಕಳಿಲ್ಲದ ಕಾರಣ ತಂಗಿಯ ಮಗುವನ್ನು ತಾನೇ ಸಾಕುತ್ತಿದ್ದಳು. ಹಾವೇರಿಯಲ್ಲಿರುವ ಒಂದೂವರೆ ಎಕರೆ ಜಮೀನು ಹಾಗೂ ಒಂದು ಮನೆ ನನ್ನ ಕೈತಪ್ಪುತ್ತದೆ ಎಂದು ಸುಧಾ, ರಾತ್ರಿ ಮಲಗಿದ್ದ ತಾಯಿಗೆ ತಲೆ ದಿಂಬಿನಿಂದ ಮುಖಕ್ಕೆ ಒತ್ತಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ನಂತರ ಮೃತದೇಹದ ಬಗ್ಗೆ ಯಾವುದೇ ಅನುಮಾನ ಬಾರದಂತೆ ಸಹಜ ಸಾವು ಎಂದು ಬಿಂಬಿಸಲು ಮುಂದಾಗಿದ್ದಾಳೆ. ಆದರೆ ಪೊಲೀಸರು ನಡೆಸಿದ ತನಿಖೆಯಲ್ಲಿ ಇದು ಸಹಜ ಸಾವಲ್ಲ, ಕೊಲೆ ಎಂಬುದು ಸಾಬೀತಾಗಿದೆ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಸುಧಾಳನ್ನು ಪೊಲೀಸರು ಬಂಧಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





