ಹೊಸನಗರ ; ಪಟ್ಟಣದ ಮಲೆನಾಡು ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಕು. ಪ್ರಿಯ ಈ ಬಾರಿಯ ಕಬಡ್ಡಿ ಪಂದ್ಯಾವಳಿಯಲ್ಲಿ ತಾಲೂಕು, ಜಿಲ್ಲಾ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಪಾಲ್ಗೊಂಡು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದು ಮಹಾರಾಷ್ಟ್ರ ರಾಜ್ಯದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ತನ್ನ ಪ್ರತಿಭೆ ಹೊರಸೂಸಲಿದ್ದು ಈ ಗ್ರಾಮೀಣ ಪ್ರತಿಭೆಗೆ ಹೊಸನಗರ ಪಟ್ಟಣದಲ್ಲಿ ಶಾಲಾ ಆಡಳಿತ ಮಂಡಳಿ ಶಾಲಾ ಅಭಿವೃದ್ಧಿ ಸಮಿತಿ ವರ್ತಕರ ಸಂಘ ಹಾಗೂ ಸಾರ್ವಜನಿಕರು ಪಟ್ಟಣದ ಮಾವಿನಕೊಪ್ಪ ವೃತ್ತದಿಂದ ಬಸ್ ನಿಲ್ದಾಣದವರೆಗೆ ತೆರೆದ ವಾಹನದಲ್ಲಿ ಘೋಷಣೆಗಳನ್ನು ಕೂಗುತ್ತಾ ವರ್ಣ ರಂಜಿತವಾಗಿ ಮೆರವಣಿಗೆ ಮೂಲಕ ಬರಮಾಡಿಕೊಂಡು ಗ್ರಾಮೀಣ ಪ್ರತಿಭೆಗೆ ಹಾರೈಸಿದರು.

ಈ ಸಂದರ್ಭದಲ್ಲಿ ವರ್ತಕರ ಸಂಘದ ಅಧ್ಯಕ್ಷ ಮಲೆಬೈಲ್ ಪೂರ್ಣೇಶ್, ಕಾರ್ಯದರ್ಶಿ ಸಂತೋಷ್ ಶೇಟ್, ಸುಧೀಂದ್ರ ಪಂಡಿತ್, ಬಿ.ಎಸ್ ಸುರೇಶ್, ನಿಖಿಲ್, ಪ್ರಭಾಕರ್, ಹರೀಶ್ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಮೊದಲಾದವರು ಉಪಸ್ಥಿತರಿದ್ದರು.

ಕು. ಪ್ರಿಯ ಅರಳಿಕೊಪ್ಪದ ಪ್ರಶಾಂತ್ ವನಜಾಕ್ಷಿ ದಂಪತಿಗಳ ಪುತ್ರಿಯಾಗಿದ್ದು ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹಾಗೂ ತಾಲೂಕಿನ ಕ್ರೀಡಾ ಪ್ರೇಮಿ ಮಾಸ್ತಿಕಟ್ಟೆ ಸುಬ್ರಮಣ್ಯ ಗ್ರಾಮೀಣ ಪ್ರತಿಭೆ ಕು. ಪ್ರಿಯಾಳ ಸಾಧನೆಗೆ ಅಭಿನಂದಿಸಿದ್ದಾರೆ.


ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





