ಹೊಸನಗರ ; ಬಿಹಾರದ ವಿಧಾನಸಭೆಯ ಚುನಾವಣೆಯಲ್ಲಿ 200ಕ್ಕಿಂತಲ್ಲೂ ಹೆಚ್ಚು ಸ್ಥಾನ ಪಡೆದು ಸ್ಪಷ್ಟ ಬಹುಮತ ಪಡೆದಿರುವ ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಎನ್ಡಿಎ ಪಕ್ಷ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿಯೂ ಕಾಂಗ್ರೆಸ್ ಪಕ್ಷ ದೂಳಿಪಟವಾಗಲಿದೆ ಎಂದು ಬಿಜೆಪಿ ಮಂಡಲದ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಹೇಳಿದರು.
ಬಿಹಾರದಲ್ಲಿ ಮೋದಿ ನೇತೃತ್ವದ ಎನ್ಡಿಎ ಪಕ್ಷ ಸ್ಪಷ್ಟ ಬಹುಮತ ಪಡೆಯುತ್ತಿದಂತೆ ಹೊಸನಗರದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದ ಸಂದರ್ಭದಲ್ಲಿ ಅವರು ಮಾತನಾಡಿ, ಕರ್ನಾಟಕದ ಕಾಂಗ್ರೆಸ್ ಪಕ್ಷ ಅಲ್ಪ ಸಂಖ್ಯಾತರ ಒಲೈಕೆ ರಾಜಕೀಯ ಮತ್ತು ಭ್ರಷ್ಟಾಚಾರದಿಂದ ಅಧಿಕಾರ ಮದದಿಂದ ಅಧಿಕಾರ ನಡೆಸುತ್ತಿದ್ದು ಕುರ್ಚಿ ಯಾರಿಗೂ ಶಾಶ್ವತವಲ್ಲ ಎಂಬುದನ್ನು ತಿಳಿಯದೇ ಅಧಿಕಾರ ನಡೆಸುತ್ತಿದ್ದು ಮುಂದೆ ಜನರು ಎಚ್ಚೆತ್ತುಕೊಂಡು ಕಾಂಗ್ರೆಸ್ ಪಕ್ಷ ದೂಳಿಪಟ ಮಾಡಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡರಾದ ಉಮೇಶ್ ಕಂಚುಗಾರ್, ಎನ್.ಆರ್ ದೇವಾನಂದ್, ಟೌನ್ ಘಟಕದ ಅಧ್ಯಕ್ಷ ಶ್ರೀಪತಿರಾವ್, ಕಾರ್ಯದರ್ಶಿ ಮಂಜುನಾಥ್ ಸಂಜೀವ, ಮನೋಜ್ ಪೂಜಾರಿ, ಮಂಡಾನಿ ಮೋಹನ್, ನಗರ ನಿತಿನ್, ಕು. ಕಾವ್ಯ ಇನ್ನೂ ಮುಂತಾದವರು ಭಾಗವಹಿಸಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





