ಬಾಳೆಹೊನ್ನೂರು ; ವೃಕ್ಷ ಮಾತೆಯೆಂದೇ ಖ್ಯಾತಿಯಾಗಿದ್ದ ಶತಾಯುಷಿ ಸಾಲುಮರದ ತಿಮ್ಮಕ್ಕ (114) ಅಗಲಿಕೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ತಮ್ಮ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಗಿಡ, ಮರಗಳನ್ನೇ ತಮ್ಮ ಮಕ್ಕಳೆಂದು ಭಾವಿಸಿ ಪೋಷಿಸುತ್ತಿದ್ದ ಅವರು 8 ಸಾವಿರಕ್ಕೂ ಹೆಚ್ಚು ಮರಗಳನ್ನು ಬೆಳೆಸಿದ್ದು ಹಿರಿದಾದ ಸಾಧನೆಯಾಗಿದೆ. ಶ್ರೀ ರಂಭಾಪುರಿ ಪೀಠದ ಹಲವಾರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅವರು ಆಶೀರ್ವಾದ ಪಡೆದದ್ದು ತಮ್ಮ ಮನದಲ್ಲಿ ಹಸಿರಾಗಿದೆ.

ಸರಳ ಸಜ್ಜನಿಕೆಯ ಸಾಲುಮರದ ತಿಮ್ಮಕ್ಕ ಅವರ ಅಗಲಿದ ಪವಿತ್ರ ಆತ್ಮಕ್ಕೆ ದಯಾಘನನಾದ ಪರಮಾತ್ಮನು ಚಿರಶಾಂತಿ ನೀಡಲಿ ಮತ್ತು ಅವರ ಅಗಲಿಕೆಯನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬದವರಿಗೂ ಮತ್ತು ಅಭಿಮಾನಿಗಳಿಗೂ ನೀಡಲಿ ಎಂದು ತಮ್ಮ ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





