ಕೋಣಂದೂರು ಬೃಹನ್ಮಠದಲ್ಲಿ ಕಾರ್ತಿಕ ದೀಪೋತ್ಸವ ಧರ್ಮ ಜಾಗೃತಿ ಸಮಾರಂಭ | ಮೂಲೆಗದ್ದೆ ಮಠದಲ್ಲಿ ಕಾರ್ತಿಕ ದೀಪೋತ್ಸವ

Written by Mahesha Hindlemane

Published on:

ರಿಪ್ಪನ್‌ಪೇಟೆ ; ಕೋಣಂದೂರು ಶ್ರೀ ಶಿವಲಿಂಗೇಶ್ವರ ಬೃಹನ್ಮಠದಲ್ಲಿ ನ. 19 ರಂದು ಬುಧವಾರ ಸಂಜೆ 5.30 ಕ್ಕೆ ಕಾರ್ತಿಕ ದೀಪೋತ್ಸವ ಧರ್ಮ ಜಾಗೃತಿ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ಮಠದ ಶ್ರೀಪತಿ ಪಂಡಿತಾರಾದ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಕಾರ್ತಿಕ ದೀಪೋತ್ಸವ ಧರ್ಮ ಜಾಗೃತಿ ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ಶ್ರೀಮದ್ ಶ್ರೀಶೈಲ ಸೂರ್ಯ ಸಿಂಹಾಸನಾಧೀಶ್ವರ 1008 ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ವಹಿಸಿ ಆಶೀರ್ವಾಚನ ನೀಡುವರು.

ಈ ಸಮಾರಂಭದ ಅಧ್ಯಕ್ಷತೆಯನ್ನು ಮಠದ ಶ್ರೀಪತಿ ಪಂಡಿತಾರಾದ್ಯ ಶಿವಾಚಾರ್ಯ ಸ್ವಾಮಿಜಿ ವಹಿಸುವರು. ಧರ್ಮಜಾಗೃತಿ ಸಮಾರಂಭಕ್ಕೆ ಸಕಾಲದಲ್ಲಿ ಭಕ್ತ ಸಮೂಹ ಭಾಗವಹಿಸಿ ಜಗದ್ಗುರುಗಳವರ ದರ್ಶನಾಶೀರ್ವಾದ ಪಡೆಯುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಮೂಲೆಗದ್ದೆ ಮಠದಲ್ಲಿ ಚನ್ನಬಸವ ಶಿವಯೋಗಿಗಳವರ ಪುಣ್ಯ ಸರಣೋತ್ಸವ ಕಾರ್ತಿಕ ದೀಪೋತ್ಸವ

ರಿಪ್ಪನ್‌ಪೇಟೆ ; ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮಠದಲ್ಲಿ ನ. 18 ರಂದು ಮಂಗಳವಾರ ಸಂಜೆ 7 ಗಂಟೆಗೆ ಲಿಂ. ಚನ್ನಬಸವ ಮಹಾಶಿವಯೋಗಿಗಳವರ ಪುಣ್ಯ ಸ್ಮರಣೋತ್ಸವ ಹಾಗೂ ಕಾರ್ತಿಕ ದಿಪೋತ್ಸವ ಕಾರ್ಯಕ್ರಮವನ್ನು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮ ಮಠದ ಅಭಿನವ ಚನ್ನಬಸವ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಠದ ಪ್ರಕಟಣೆ ತಿಳಿಸಿದೆ.

ಮಂಗಳವಾರ ಬೆಳಗ್ಗೆ ಕರ್ತೃಗದ್ದುಗೆಗೆ ರುದ್ರಾಭಿಷೇಕ ಮಹಾಪೂಜೆ ನಂತರ ಸಂಜೆ ಮಾವಿನಹೊಳೆಯಲ್ಲಿ ಕಾರ್ತಿಕ ದೀಪೋತ್ಸವದ ಅಂಗವಾಗಿ ದೀಪಾರಾಧನೆ ಮಹಾಮಂಗಳಾರತಿ ತೀರ್ಥಪ್ರಸಾದ ವಿತರಣೆ ಸಾಮೂಹಿಕ ಅನ್ನಸಂತರ್ಪಣೆ ಜರುಗಲಿದೆ.

Leave a Comment