ದೆಹಲಿ ದಾಳಿ ಖಂಡಿಸಿ ರಿಪ್ಪನ್‌ಪೇಟೆಯಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ಮಾನವ ಸಪರಳಿ | ನ. 20 ರಂದು ರಿಪ್ಪನ್‌ಪೇಟೆಯಲ್ಲಿ ಸಹಕಾರಿ ಸಪ್ತಾಹದ ಸಮಾರೋಪ ಸಮಾರಂಭ

Written by Mahesha Hindlemane

Published on:

ರಿಪ್ಪನ್‌ಪೇಟೆ ; ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತಾಂದ ಜಿಹಾದಿ ಉಗ್ರಹ ದಾಳಿಯನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಇಸ್ಮಾಮಿಕ್ ಭಯೋತ್ಪಾದಕರಿಗೆ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ನೂರಾರು ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಮಾನವ ಸರಪಳಿ ಮೂಲಕ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಪ್ರತಿಭಟನೆಯಲ್ಲಿ ಹಿಂದು ಜಾಗರಣ ವೇದಿಕೆಯ ಕಾರ್ತಿಕ ಕೌಟಿನ್ಯ ಮಾತನಾಡಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪದಾಯಿನ ದಾಳಿ ನಡೆದಿದ್ದದು ತನ್ನನ್ನು ತಾನೇ ಸ್ಪೋಟಿಸಿಕೊಂಡು ಉಗ್ರ ಅದರ ಪರಿಣಾಮವಾಗಿ 12 ಕ್ಕಿಂತಲ್ಲೂ ಹೆಚ್ಚಿನ ಸಾವುಗಳಾಗಿ 30 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಈ ರೀತಿಯ ಘಟನೆಗಳನ್ನು ಮಾಡುವುದೇ ಇಸ್ಲಾಮಿಕ ಮತಾಂದತೆಯ ಉಗ್ರರ ಉದ್ದೇಶ ಎಂದು ಹೇಳಿ ಅಂತವರನ್ನು ಸದೆ ಬಡಿಯುವ ಮೂಲಕ ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಕಾನೂನು ಕ್ರಮ ಜರುಗಿಸಲು ಕೇಂದ್ರ ಸರ್ಕಾರ ಮುಂದಾಗಬೇಕು ಎಂದರು.

ಜಿಲ್ಲಾ ಬಿಜೆಪಿ ಮುಖಂಡ ಆರ್.ಟಿ.ಗೋಪಾಲ್ ಮಾತನಾಡಿ, ಭಯೋತ್ಪದನೆಯ ಮೂಲಕ ದೇಶದ್ರೋಹ ದೃಶ್ಯ ಕೃತ್ಯವನ್ನು ಈ ಹಿಂದಿನಿಂದಲೂ ನಡೆಸಲಾಗುತ್ತಿದ್ದು ಇದಕ್ಕೆ ತಕ್ಕ ಉತ್ತರ ನೀಡುವುದರೊಂದಿಗೆ ಮಟ್ಟ ಹಾಕುವ ಕಾಲ ದೂರವಿಲ್ಲ ಎಂದರು.

ಬಿಜೆಪಿ ಮುಖಂಡರು ಹಿಂದು ಜಾಗರಣ ವೇದಿಕೆಯವರು ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.


ನ. 20 ರಂದು ರಿಪ್ಪನ್‌ಪೇಟೆಯಲ್ಲಿ ಸಹಕಾರಿ ಸಪ್ತಾಹದ ಸಮಾರೋಪ ಸಮಾರಂಭ

ರಿಪ್ಪನ್‌ಪೇಟೆ ; ಕರ್ನಾಟಕ ರಾಜ್ಯ ಸಹಕಾರ ಮಂಡಳ ನಿಯಮಿತ ಹಾಗೂ ಜಿಲ್ಲಾ ಸಹಕಾರ ಯೂನಿಯನ್ ಜಿಲ್ಲಾ ಸಹಕಾರ ಬ್ಯಾಂಕ್ ಶಿವಮೊಗ್ಗ ಸಹಕಾರ ಹಾಲು ಒಕ್ಕೂಟ ಹಾಗೂ ಸಹಕಾರ ಇಲಾಖೆ ಹೊಸನಗರ ತಾಲ್ಲೂಕಿನ ಎಲ್ಲ ಸಹಕಾರ ಸಂಘ ಮತ್ತು ಬ್ಯಾಂಕ್‌ಗಳ ಸಂಯುಕ್ತಾಶ್ರಯದಲ್ಲಿ ನವೆಂಬರ್ 20 ರಂದು ಗುರುವಾರ ಇಲ್ಲಿನ ವಿಶ್ವಮಾನವ ಒಕ್ಕಲಿಗರ ಸಭಾಭವನದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ ಹಾಗೂ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಮತ್ತು ಶಿವಮೊಗ್ಗ ಹಾಲು ಒಕ್ಕೂಟದಿಂದ ರಾಜ್ಯ ಹಾಲು ಒಕ್ಕೂಟದ ನಿರ್ದೇಶಕರಾಗಿ ಆಯ್ಕೆಯಾದ ಪ್ರತಿನಿಧಿಗೆ ಸನ್ಮಾನ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ವಾಟಗೋಡು ಸುರೇಶ್ ತಿಳಿಸಿದರು.

ರಿಪ್ಪನ್‌ಪೇಟೆಯ ವಿ.ಎಸ್.ಎಸ್.ಎನ್. ಸಭಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನವೆಂಬರ್ 20 ರಂದು ಗುರುವಾರ ಬೆಳಗ್ಗೆ 9 ಗಂಟೆಯಿಂದ ವಿನಾಯಕ ದೇವಸ್ಥಾನದಿಂದ ವಿವಿಧ ಜಾನಪದ ಕಲಾತಂಡಗಳ ಕಲಾ ಮೆರಗಿನೊಂದಿಗೆ ಹೊರಟು ಸಾಗರ ರಸ್ತೆಯಲ್ಲಿರುವ ವಿಶ್ವಮಾನವ ಸಭಾಭವನ ತಲುಪಲಿದೆ ನಂತರ 10 ಗಂಟೆಗೆ 72ನೇ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭವನ್ನು ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ಎಂ.ಎ.ಡಿ.ಬಿ.ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಉದ್ಘಾಟಿಸುವರು. ಸಹಕಾರಿಗಳಿಗೆ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಗೋಪಾಲಕೃಷ್ಣ ಬೇಳೂರು ಸನ್ಮಾನಿಸಿ ಗೌರವಿಸುವರು.

ಈ ಸಮಾರಂಭದ ಆಧ್ಯಕ್ಷತೆಯನ್ನು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ವಾಟಗೋಡು ಸುರೇಶ್ ವಹಿಸುವರು.
ವಿಶೇಷ ಆಹ್ವಾನಿತರಾಗಿ ವಿಧಾನಪರಿಷತ್ ಸದಸ್ಯ ಬಲ್ಕೀಷ್ ಬಾನು, ಡಿ.ಎಸ್. ಅರುಣ್ ಹಾಗು ಜಿಲ್ಲಾ ಸಹಕಾರ ಬ್ಯಾಂಕ್ ಉಪಾಧ್ಯಕ್ಷ ಎಸ್.ಕೆ.ಮರಿಯಪ್ಪ ಸೇರಿದಂತೆ ಜಿಲ್ಲೆಯ ವಿವಿಧ ಸಹಕಾರ ಸೌಹಾರ್ಧ ಸಂಘಗಳ ಅಧ್ಯಕ್ಷರು ಹಾಗೂ ಸಂಘದ ಅಡಳಿತ ಮಂಡಳಿಯವರು ನಿರ್ದೇಶಕರು ಕಾರ್ಯದರ್ಶಿಗಳು ಸಿಬ್ಬಂದಿವರ್ಗ ಪಾಲ್ಗೊಳುವರು.

ಸುದ್ದಿಗೋಷ್ಠಿಯಲ್ಲಿ ವಿಶ್ವಮಾನವ ಪತ್ತಿನ ಸಹಕಾರ ಸಂಘದ ಆಧ್ಯಕ್ಷ ಹೆಚ್.ವಿ.ಹರೀಶ್, ನಿರ್ದೇಶಕರಾದ ಆಶೋಕ, ಸುಮಂಗಳಾ ಹರೀಶ್, ಜಯಂತಿ ಅಶೋಕ ಇನ್ನಿತರರು ಹಾಜರಿದ್ದರು.

Leave a Comment