ನ. 28 ರಿಂದ 30 ರವರೆಗೆ ರಿಪ್ಪನ್‌ಪೇಟೆ ಕಲಾಕೌಸ್ತುಭ ಕನ್ನಡ ಸಂಘದ ವಾರ್ಷಿಕೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ

Written by Mahesha Hindlemane

Published on:

ರಿಪ್ಪನ್‌ಪೇಟೆ ; ನ. 28 ರಿಂದ 30 ರವರೆಗೆ ಮೂರು ದಿನಗಳ ಕಾಲ ಇಲ್ಲಿನ ಕಲಾ ಕೌಸ್ತುಭ ಕನ್ನಡ ಸಂಘದ 32ನೇ ವರ್ಷದ ವಾರ್ಷಿಕೋತ್ಸವ ಹಾಗೂ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ವಿವಿಧ ಸಾಂಸ್ಕೃತಿಕ ಹಾಗೂ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ ಮತ್ತು ವಿವಿಧ ಸ್ಪರ್ಧಾ ಕಾರ್ಯಕ್ರಮವು ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಕಲಾಕೌಸ್ತುಭ ಕನ್ನಡ ಸಂಘದ ಅಧ್ಯಕ್ಷ ಮುರುಳಿಧರ ಮತ್ತು ಕಾರ್ಯದರ್ಶಿ ಬಳೆಗಾರ ರಾಮಚಂದ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಇದೇ ನ. 28 ರಂದು ಶುಕ್ರವಾರ ಬೆಳಗ್ಗೆ 8.30ಕ್ಕೆ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರ ರಾಜಬೀದಿ ಮೆರವಣಿಗೆ ನಂತರ ಕಲಾಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷ ಎಂ.ಬಿ.ಮಂಜುನಾಥ ಇವರಿಂದ ಕನ್ನಡ ಧ್ವಜಾರೋಹಣ, ನಂತರ ಸಭಾ ಕಾರ್ಯಕ್ರಮ ಅಧ್ಯಕ್ಷ ಮುರುಳಿಧರ ಕೆರೆಹಳ್ಳಿ ಇವರು ಅಧ್ಯಕ್ಷತೆ ವಹಿಸುವರು. ಮುಖ್ಯಅತಿಥಿಗಳಾಗಿ ಗ್ರಾಮ ಪಂಚಾಯಿತ್ ಅಧ್ಯಕ್ಷೆ ಧನಲಕ್ಷ್ಮಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ ಹಾಗೂ ಸ್ಥಳೀಯ ಪಂಚಾಯಿತ್ ಜನಪ್ರತಿನಿಧಿಗಳು ಭಾಗವಹಿಸಿವರು.

ಇದೇ ದಿನ ರಾತ್ರಿ 7.30 ಕ್ಕೆ ಕಲರ್ಸ್ ಕನ್ನಡ ಖ್ಯಾತಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತುಳುನಾಡ ಗಾನ ಗಂಧರ್ವ ಪುತ್ತೂರು ಜಗದೀಶ್ ಆಚಾರ್ಯ ಮತ್ತು ಬಳಗದವರಿಂದ ಸಂಗೀತ ಗಾನ ಸಂಭ್ರಮ ಮನೋರಂಜನಾ ಕಾರ್ಯಕ್ರಮ ಜರುಗಲಿದೆ.

ನ. 29 ರಂದು ಶನಿವಾರ ಬೆಳಗ್ಗೆ 9.30 ಕ್ಕೆ ದಿ.ರಾಮಚಂದ್ರ ಸ್ಮರಣಾರ್ಥ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ ಕ್ರೀಡಾಕೂಟದ ಉದ್ಘಾಟನೆಯನ್ನು ನಿವೃತ್ತ ದೈಹಿಕ ಶಿಕ್ಷಣ ಪರಿವೀಕ್ಷಕ ಚಂದ್ರಬಾಬು ನೇರವೇರಿಸುವರು.

ಮುಖ್ಯ ಅತಿಥಿಗಳಾಗಿ ವಿಜಯಕುಮಾರ ಶೆಟ್ಟಿ, ಅಲೆಕ್ಸ್, ದಿನೇಶ್‌ಗೌಡ, ಗನ್ನಿಸಾಬ್, ಗೌತಮ್, ಖಾದ್ರಿ, ಯೋಗೇಶ್, ಪ್ರಶಾಂತ್ ಭಾಗವಹಿಸುವರು. ರಾತ್ರಿ 7.30ಕ್ಕೆ ಶಾರದಾಂಬ ಸಾಂಸ್ಕೃತಿಕ ಕಲಾಕೇಂದ್ರ ಇವರಿಂದ ಭರತನಾಟ್ಯ ಹಾಗೂ ವಿವಿಧ ಮನೋರಂಜನಾ ಕಾರ್ಯಕ್ರಮ ಜರುಗಲಿದೆ.

ನ. 30 ರಂದು ಭಾನುವಾರ ಸಂಜೆ 7.30 ಕ್ಕೆ ಕನ್ನಡ ರಾಜ್ಯೋತ್ಸವ ಸಮಾರೋಪ ಸಮಾರಂಭ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ನೇರವೇರಿಸುವರು.

ಸಮಾರಂಭದ ಅಧ್ಯಕ್ಷತೆಯನ್ನು ಕಲಾಕೌಸ್ತುಭ ಕನ್ನಡ ಸಂಘದ ಅಧ್ಯಕ್ಷ ಮುರುಳಿಧರ್ ವಹಿಸುವರು. ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಹುಮಾನ ವಿತರಿಸುವರು.

ಮುಖ್ಯ ಅತಿಥಿಗಳಾಗಿ ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ ಹರತಾಳು ಹಾಲಪ್ಪ, ಶಾಸಕರಾದ ಚನ್ನಬಸಪ್ಪ, ಡಾ.ಧನಂಜಯ ಸರ್ಜಿ, ಡಿ.ಎಸ್. ಅರುಣ್, ಡಿ.ಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ, ಇನ್ನಿತರ ಮುಖಂಡರು ಭಾಗವಹಿಸುವರು. ನಂತರ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಹಾಗೂ ರಾಷ್ಟ್ರೀಯ ಕೃಷಿ ಪ್ರಶಸ್ತಿ ಪಡೆದ ರೈತರಿಗೆ ಕ್ರೀಡಾ ಮತ್ತು ಸಹಕಾರ ರತ್ನ ಪ್ರಶಸ್ತಿ ಪಡೆದವರಿಗೆ ಹಾಗೂ ಇನ್ನಿತರ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಗುವುದೆಂದರು.

ಇದೇ ದಿನ ರಾತ್ರಿ 9 ಗಂಟೆಗೆ ಮಂಗಳೂರಿನ ಕಲಾಕುಂಭ ಕಲಾವಿದರು ಕುಳಾಯಿ ಇವರಿಂದ ಪರಮಾತ್ಮ ಪಂಜುರ್ಲಿ ಪೌರಾಣಿಕ ನಾಟಕ ಪ್ರದರ್ಶನ ನಡೆಯಲಿದೆ.

Leave a Comment