ಅಮೃತ ಬಿಂದು ಹೆಸರಿನಲ್ಲಿ ತಾಯಂದಿರ ಎದೆ ಹಾಲಿನ ಬ್ಯಾಂಕ್‌ ಸ್ಥಾಪಿಸಲಾಗುವುದು ; ಸರ್ಜಿ

0 227

ಶಿವಮೊಗ್ಗ: ರೋಟರಿ ಕ್ಲಬ್ ಶಿವಮೊಗ್ಗ (Shivamogga) ಸೆಂಟ್ರಲ್ ಮತ್ತು ಸರ್ಜಿ ಆಸ್ಪತ್ರೆಗಳ ಸಮೂಹದ ಸಹಯೋಗದೊಂದಿಗೆ ಇಲ್ಲಿನ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಡಿಸೆಂಬರ್ 20 ರಂದು ಬೆಳಗ್ಗೆ 11 ಗಂಟೆಗೆ ಅಮೃತ ಬಿಂದು ಹೆಸರಿನಲ್ಲಿ ತಾಯಂದಿರ ಎದೆ ಹಾಲಿನ ಬ್ಯಾಂಕ್‌ನ್ನು ಸ್ಥಾಪಿಸಲಾಗುವುದು ಎಂದು ಆಸ್ಪತ್ರೆಯ ವೈದ್ಯ ಡಾ.ಧನಂಜಯ ಸರ್ಜಿ ಹೇಳಿದರು.


ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ತಾಯಿಯ ಎದೆಹಾಲು ಅಮೃತಕ್ಕೆ ಸಮಾನವಾದುದು. ಅದು ಮಗುವಿನ ಜೀವವನ್ನು ಉಳಿಸುತ್ತದೆ. ವಿಶೇಷವಾಗಿ ಅವಧಿಗೆ ಮುಂಚೆ ಹುಟ್ಟಿದ ಮಗುವಿಗೆ ಮತ್ತು ತೂಕ ಕಡಿಮೆ ಇರುವ ಮಗುವಿಗೆ ಹಾಲಿನ ಅವಶ್ಯಕತೆ ಹೆಚ್ಚಾಗಿರುತ್ತದೆ. ಅನೇಕ ಸಂದರ್ಭಗಳಲ್ಲಿ ಮಗುವಿಗೆ ತಾಯಿಯ ಹಾಲು ಸಿಗುವುದಿಲ್ಲ. ಇಂತಹ ಸಂದರ್ಭದಲ್ಲಿ ಮಗುವಿನ ಬೆಳಿವಣಿಗೆ ಕುಂಠಿತವಾಗುತ್ತದೆ. ಇದನ್ನು ಮನಗಂಡು ಎದೆಹಾಲನ್ನು ಸಂರಕ್ಷಿಸಿ ಪಾಶ್ಚಾತ್ಯೀಕರಿಸಿ ಅದನ್ನು ಮಗುವಿಗೆ ನೀಡಿದರೆ, ಮಗುವಿನ ಆರೋಗ್ಯ ದೃಷ್ಠಿಯಿಂದ ಅನುಕೂಲವಾಗುತ್ತದೆ ಎಂದರು.


ಒಂದು ಅಂಕಿ ಅಂಶದ ಪ್ರಕಾರ ಶೇ.46 ರಷ್ಟು ನವಜಾತ ಶಿಶುಗಳಿಗೆ ಸಮರ್ಪಕವಾಗಿ ಸ್ತನ್ಯಪಾನವಾಗುತ್ತಿಲ್ಲ ಎಂದು ತಿಳಿದು ಬರುತ್ತಿದೆ. ಇದರ ಪರಿಣಾಮ ಮಕ್ಕಳಲ್ಲಿ ನಾನಾ ರೀತಿಯ ಸಮಸ್ಯೆಗಳು ಉಂಟಾಗುತ್ತಿವೆ. ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಅಥವಾ ಮೆದುಳಿನ ಬೆಳವಣಿಗೆ ಆಗಿರಬಹುದು, ಇವೆಲ್ಲದರ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಇದರ ಪ್ರಾಮುಖ್ಯತೆ ಅರಿತೇ ಎಲ್ಲ ನವಜಾತ ಶಿಶುಗಳಿಗೂ ತಾಯಂದಿರ ಎದೆಹಾಲು ದೊರೆಯಬೇಕೆಂಬ ಸದುದ್ದೇಶದೊಂದಿಗೆ ಎದೆಹಾಲಿನ ಬ್ಯಾಂಕ್‌ನ್ನು ಪ್ರಪಂಚಾದ್ಯಂತ ಸ್ಥಾಪನೆ ಮಾಡಲಾಗಿದೆ ಇದೇ ಮೊದಲ ಬಾರಿಗೆ ಮಧ್ಯ ಕರ್ನಾಟಕದಲ್ಲಿ ಅಮೃತ ಬಿಂಧು ಶಿವಮೊಗ್ಗ ಸರ್ಜಿ ಆಸ್ಪತ್ರೆಯಲ್ಲಿ ಸ್ಥಾಪನೆಯಾಗಲಿದೆ ಎಂದರು.


ಎದೆಹಾಲನ್ನು ತಾಯಿ ನೀಡುವುದರಿಂದ ಶಿಶುವಿಗೆ ಆಗುವ ಲಾಭಗಳು ಆಗುತ್ತವೆ. ಎದೆಹಾಲು ಶಿಶುಗಳಿಗೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸುವ ಮೂಲಕ ದೇಹದ ಸಮತೋಲನ ಮತ್ತು ಸಮಗ್ರ ಬೆಳವಣಿಗೆಗೆ ಪೂರಕವಾಗುತ್ತದೆ. ಎದೆ ಹಾಲಿನ ಸೇವನೆಯು ಶಿಶುಗಳಿಗೆ ದೇಹದಲ್ಲಿ ವಿವಿಧ ಸೋಂಕು ಮತ್ತು ರೋಗಗಳಿಂದ ರಕ್ಷಿಸುವ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ ಎಂದರು.


ಕಾರ್ಯಕ್ರಮದ ಉದ್ಘಾಟನೆ:

ಕೋಡಿಮಠದ ಶ್ರೀ ಡಾ. ಶಿವಾನಂದ ರಾಜೇಂದ್ರ ಸ್ವಾಮೀಜಿ ಅವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ಜಿಲ್ಲಾ ಗವರ್ನರ್ ಬಿ.ಸಿ.ಗೀತಾ,  ಬೆಂಗಳೂರು ದಯಾನಂದ ಸಾಗರ್ ಆಸ್ಪತ್ರೆಯ ಮಕ್ಕಳ ವಿಭಾಗದ ಮುಖ್ಯಸ್ಥರಾದ ಡಾ.ಆಶಾ ಬೆನಕಪ್ಪ, ಶಿವಮೊಗ್ಗದ ಖ್ಯಾತ ವೈದ್ಯ ಡಾ.ಪಿ.ನಾರಾಯಣ್, ರಾಷ್ಟಿçÃಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ಸಹ ಕಾರ್ಯವಾಹ ಪಟ್ಟಾಭಿರಾಮ್ ಜೀ, ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಸಿಸ್ಟೆಂಟ್ ಗವರ್ನರ್ ರವಿ ಕೋಟೋಜಿ, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್. ಉಪಸ್ಥಿತರಿರುವರು ರೊ.ಎಚ್.ಪಿ.ಶಿವರಾಜ್ ಅಧ್ಯಕ್ಷತೆ ವಹಿಸುವರು ಎಂದರು.


ಪತ್ರಿಕಾಗೋಷ್ಟಿಯಲ್ಲಿ ವೈದ್ಯ ಡಾ.ಪಿ.ನಾರಾಯಣ್, ಅಸಿಸ್ಟೆಂಟ್ ಗವರ್ನರ್ ರವಿ ಕೋಟೋಜಿ, ರೋಟರಿ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷರಾದ ರೊ.ಎಚ್.ಪಿ.ಶಿವರಾಜ್, ರೊ.ಜೆ.ಪಿ.ಚಂದ್ರು,  ಸರ್ಜಿ ಆಸ್ಪತ್ರೆ ಮೆಡಿಕಲ್ ಸೂಪರಿಂಟ್‌ಂಡೆಂಟ್ ಡಾ.ಪ್ರಶಾಂತ್ ಎಸ್.ವಿ., ಉಪಸ್ಥಿತರಿದ್ದರು.

Leave A Reply

Your email address will not be published.