ಬಾಳೆಹೊನ್ನೂರು ; ಮೈಸೂರು ಮಹಾರಾಜ ಹಾಗೂ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇವರು ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ಜರುಗಲಿರುವ ಲಿಂ. ಶ್ರೀ ರಂಭಾಪುರಿ ಶಿವಾನಂದ ಜಗದ್ಗುರುಗಳವರ ಪೀಠಾರೋಹಣದ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಲು ನಾಳೆ (ನ.27) ಬೆಳಿಗ್ಗೆ 10.30ಕ್ಕೆ ಶ್ರೀ ಜಗದ್ಗುರು ರಂಭಾಪುರಿ ಪೀಠಕ್ಕೆ ಆಗಮಿಸುವರು.
ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಯೋಜನೆ ಸಚಿವ ವಿ.ಸೋಮಣ್ಣನವರು ನಾಳೆ ಬೆಳಿಗ್ಗೆ 8.30ಕ್ಕೆ ಚಿಕ್ಕಮಗಳೂರಿನಿಂದ ಹೊರಟು ಬಾಳೆಹೊನ್ನೂರಿಗೆ 10.30ಕ್ಕೆ ತಲುಪುವರು.

ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ಜರುಗಲಿರುವ ಲಿಂ. ಶ್ರೀ ರಂಭಾಪುರಿ ಶಿವಾನಂದ ಜಗದ್ಗುರುಗಳವರ ಪೀಠಾರೋಹಣದ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 12.00 ಗಂಟೆಗೆ ಹೊರಟು 1.45ಕ್ಕೆ ಚಿಕ್ಕಮಗಳೂರು ತಲುಪಿ ರೈಲ್ವೆ ಮುಖಾಂತರ ಬೆಂಗಳೂರಿಗೆ ಮರು ಪ್ರಯಾಣ ಬೆಳೆಸುವರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





