ಕೋಡೂರು ಗ್ರಾ.ಪಂ.ಗೆ ಗಾಂಧಿ ಗ್ರಾಮ ಪುರಸ್ಕಾರ

Written by Mahesha Hindlemane

Updated on:

ಹೊಸನಗರ ; ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಕೋಡೂರು ಗ್ರಾಮ ಪಂಚಾಯಿತಿಯೂ 2023-24 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನ ಆಗುವ ಮೂಲಕ ಎರಡನೇ ಬಾರಿಗೆ ಪ್ರಶಸ್ತಿ ಸ್ವೀಕರಿಸಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೋಮವಾರ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯೋಜಿಸಿದ್ದ 2023-2024ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಕಾರ್ಯಕ್ರಮದಲ್ಲಿ ರಾಜ್ಯದ ತಾಲ್ಲೂಕಿಗೆ ಒಂದರಂತೆ 238 ಗ್ರಾಮ ಪಂಚಾಯತಿಗಳಿಗೆ ನಗದು 5 ಲಕ್ಷ ರೂ. ಪುರಸ್ಕಾರ ಮತ್ತು ಸ್ಮರಣಿಕೆ ನೀಡಿ ಗೌರವಿಸಿದರು.

ಕೋಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಜಯಪ್ರಕಾಶ್ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಗರಾಜ್ ಪ್ರಶಸ್ತಿ ಸ್ವೀಕರಿಸಿದರು.

Leave a Comment