ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ !

0 824

ಶಿವಮೊಗ್ಗ : ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿರುವ ಆರೋಪದ ಹಿನ್ನೆಲೆ ಕಟ್ಟಡವೊಂದರ ಮೇಲೆ ಪೊಲೀಸರು (Police) ದಾಳಿ ನಡೆಸಿದರು.

ಗಾಂಧಿನಗರದ 1ನೇ ಪ್ಯಾರಲಲ್ ರಸ್ತೆಯ ಕಟ್ಟಡವೊಂದರ ನೆಲ ಮಾಳಿಗೆಯಲ್ಲಿ ದಂಧೆ ನಡೆಸುತ್ತಿರುವ ಆರೋಪದ ಹಿನ್ನೆಲೆ ದಾಳಿ ನಡೆಸಲಾಗಿದೆ.


ಜಯನಗರ ಠಾಣೆ ಇನ್ಸ್‌ಪೆಕ್ಟರ್ ಸಿದ್ದನಗೌಡ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಮೂವರು ಮಹಿಳೆಯರನ್ನು ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ.

ಕಚೇರಿ ಮತ್ತು ಗೋಡೋನ್‌ಗಾಗಿ ಕಟ್ಟಡವೊಂದರ ನೆಲ ಮಾಳಿಗೆಯನ್ನು ಯುವಕನೊಬ್ಬ ಬಾಡಿಗೆಗೆ ಪಡೆದಿದ್ದ, ಅದರಲ್ಲಿಯೇ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಎಂದು ಆರೋಪಿಸಲಾಗಿದೆ.

Leave A Reply

Your email address will not be published.