ಹೊಸನಗರ ; ಕಳೆದ ಸೆಪ್ಟೆಂಬರ್ ತಿಂಗಳ 19ರಂದು ತೆಪ್ಪದಲ್ಲಿ ಚಕ್ರಾ ಹಿನ್ನೀರು ದಾಟುತ್ತಿರುವಾಗ ಸಂಭವಿಸಿದ ಅವಘಡದಲ್ಲಿ ಸಾವಿಗೀಡಾಗ ತಾಲೂಕಿನ ಹೊಸೂರು-ಸಂಪೆಕಟ್ಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಂಟ್ವಾಡಿ ಮಜಿರೆ ವಾಸಿ ಮೃತ ಯುವಕ ಪೂರ್ಣೇಶ್ ಕುಟುಂಬಕ್ಕೆ ಶಾಸಕ ಆರಗ ಜ್ಞಾನೇಂದ್ರ ಸರ್ಕಾರದ 5 ಲಕ್ಷ ರೂ. ಮೌಲ್ಯದ ಪರಿಹಾರದ ಚೆಕ್ ಅನ್ನು ಮೃತನ ಕುಟುಂಬಕ್ಕೆ ಹಸ್ತಾಂತರಿಸಿದರು.

ಬಳಿಕ ಮಾತನಾಡಿದ ಅವರು, ಈ ಭಾಗದ ಪರಿಶಿಷ್ಟ ಕುಟುಂಬಗಳಿಗೆ ಸಂಚಾರ ಸಂಪರ್ಕ ಕಲ್ಪಿಸುವ ದೃಷ್ಟಿಯಿಂದ ಪೂರ್ಣೇಶ್ ಮೃತಪಟ್ಟ ಸಮೀಪದಲ್ಲಿ 25 ಲಕ್ಷ ರೂ. ಅನುದಾನದಲ್ಲಿ ಕಾಲುಸೇತುವೆ ನಿರ್ಮಾಣಕ್ಕೆ ಈಗಾಗಲೇ ತಯಾರಿ ನಡೆದು ಹಣ ಬಿಡುಗಡೆಯಾಗಿದೆ. ಬರುವ ಬೇಸಿಗೆಯಲ್ಲಿ ತ್ವರಿತ ರೀತಿಯಲ್ಲಿ ಸೇತುವೆ ನಿರ್ಮಾಣ ಕಾಮಗಾರಿ ಆರಂಭಗೊಳ್ಳಲಿದೆ ಎಂಬ ಇಂಗಿತ ವ್ಯಕ್ತಪಡಿಸಿದರು.
ಈ ವೇಳೆ ತಹಸೀಲ್ದಾರ್ ಭರತ್ ರಾಜ್, ಶಿರಸ್ತೇದಾರ್ ಕಟ್ಟೆ ಮಂಜುನಾಥ್, ಪ್ರಮುಖರಾದ ಕೆ.ವಿ.ಕೃಷ್ಣಮೂರ್ತಿ, ರಮಾಕಾಂತ್ ಸೇರಿದಂತೆ ಹಲವರು ಇದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





