ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಬಾವಿಯಲ್ಲಿ ಶವವಾಗಿ ಪತ್ತೆ !

0 2,303

ಮೂಡಿಗೆರೆ : ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ (Missing) ಕಾಲೇಜು (College) ವಿದ್ಯಾರ್ಥಿನಿಯ (Student) ಶವ ಇಂದು ಬಾವಿಯಲ್ಲಿ ಪತ್ತೆಯಾಗಿದೆ.

ಮೃತ ವಿದ್ಯಾರ್ಥಿನಿಯನ್ನು ಜಿ.ಹೊಸಳ್ಳಿ ಗ್ರಾಮದ ಕೃಷ್ಣಮೂರ್ತಿ ಎಂಬುವವರ ಪುತ್ರಿ ಸೃಷ್ಟಿ (19) ಎಂದು ಗುರುತಿಸಲಾಗಿದೆ.

ಮೂಡಿಗೆರೆ (Mudigere) ತಾಲ್ಲೂಕು ಗೋಣಿಬೀಡು ಠಾಣೆ ವ್ಯಾಪ್ತಿಯ ಜಿ.ಹೊಸಳ್ಳಿ ಗ್ರಾಮದಲ್ಲಿ ಗುರುವಾರ ಸಂಜೆ ಸೃಷ್ಟಿ ನಾಪತ್ತೆಯಾಗಿದ್ದಳು. ನಾಪತ್ತೆಯಾದಾಗಿನಿಂದ ಸ್ಥಳೀಯರು ಸೇರಿ ಹುಡುಕಾಟ ನಡೆಸಿದ್ದು ಇಂದು ಬೆಳಿಗ್ಗೆ ಗ್ರಾಮದ ಕುಡಿಯುವ ನೀರು ಯೋಜನೆಯ ಬಾವಿಯಲ್ಲಿ ಯುವತಿಯ ಶವ ಪತ್ತೆಯಾಗಿದೆ.

ಸೃಷ್ಟಿ ಹಾಸನದ ಮಹಿಳಾ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದರು. ಹಾಸ್ಟೆಲ್ ನಿಂದ ಕಾಲೇಜಿಗೆ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ.

ಕಳೆದ ವಾರ ಮನೆಗೆ ಬಂದಿದ್ದ ಸೃಷ್ಟಿ ಗುರುವಾರ ಸಂಜೆ ಇದ್ದಕ್ಕಿದ್ದಂತೆ ಮನೆಯಿಂದ ನಾಪತ್ತೆಯಾಗಿದ್ದಳು. ಸೃಷ್ಟಿಗಾಗಿ ಸುತ್ತಮುತ್ತಲ ಪ್ರದೇಶಗಳಲ್ಲಿ ತೀವ್ರ ಹುಡುಕಾಟ ನಡೆಸಲಾಗಿತ್ತು ಆದರೆ ಪತ್ತೆಯಾಗಿರಲಿಲ್ಲ.

ಇಂದು ಮುಂಜಾನೆ ಗ್ರಾಮದ ಕುಡಿಯುವ ನೀರಿನ ಮೋಟಾರ್ ಅಳವಡಿಸಿರುವ ಬಾವಿಯಲ್ಲಿ ಯುವತಿಯ ಶವ ತೇಲುತ್ತಿರುವುದನ್ನು ವಾಟರ್ ಮ್ಯಾನ್ ಗಮನಿಸಿ ಮಾಹಿತಿ ನೀಡಿದ್ದಾರೆ. ಗೋಣಿಬೀಡು ಠಾಣೆಯಲ್ಲಿ ದೂರು ದಾಖಲಾಗಿದ್ದು ಶವವನ್ನು ಮೇಲೆತ್ತಲು ತಯಾರಿ ನಡೆಸಲಾಗಿದೆ.

Leave A Reply

Your email address will not be published.