ಡಿ. 25 ರಂದು ನಾಗರಹಳ್ಳಿಯಲ್ಲಿ ಕೂಳೆ ಪಂಚಮಿ ಜಾತ್ರಾ ಮಹೋತ್ಸವ

Written by Mahesha Hindlemane

Updated on:

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ನಾಗರಹಳ್ಳಿ ನಾಗೇಂದ್ರಸ್ವಾಮಿಯ ಕೂಳೆ ಪಂಚಮಿ ಜಾತ್ರಾ ಮಹೋತ್ಸವ ಡಿ.25 ರಂದು ನಡೆಯಲಿದೆ ನಾಗರಹಳ್ಳಿ ನಾಗೇಂದ್ರ ಸ್ವಾಮಿ ದೇವಸ್ಥಾನ ಸೇವಾ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಬೇಸಿಗೆ-ಮಳೆಗಾಲದಲ್ಲಿ ವರ್ಷದಲ್ಲಿ ಎರಡು ಬಾರಿ ಬರುವ ನಾಗರಪಂಚಮಿಯ ಹಬ್ಬದ ದಿನದಂದು ಇಲ್ಲಿ ಜಾತ್ರಾ ಮಹೋತ್ಸವವು ವೈಭವದೊಂದಿಗೆ ಆಚರಿಸಲಾಗುತ್ತದೆ.

ಇದೇ 25 ರಂದು ಗುರುವಾರ ಬೆಳಗ್ಗೆ 6 ರಿಂದ ದೇವಸ್ಥಾನದ ಪ್ರಧಾನ ಅರ್ಚಕ ಲಕ್ಷ್ಮಿನಾರಾಯಣ ಭಟ್ ಮತ್ತು ಕಿರಣ್‌ಭಟ್ ನೇತೃತ್ವದಲ್ಲಿ ಶ್ರೀ ನಾಗೇಂದ್ರಸ್ವಾಮಿಗೆ ಪಂಚಾಮೃತ ಅಭಿಷೇಕ ಪವಮಾನ ಪೂಜೆ ವಿಶೇಷ ಅಲಂಕಾರ ಪೂಜೆ ಮಹಾಮಂಗಳಾರತಿ ನಂತರ ಸಾಮೂಹಿಕ ಅನ್ನಸಂತರ್ಪಣೆ ಸಹ ಜರುಗಲಿದೆ ಎಂದು ಸಮಿತಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು

ಸಕಲ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ದರ್ಶನಾಶಿರ್ವಾದ ಪಡೆದುಕೊಳ್ಳುವಂತೆ ತಿಳಿಸಿದ್ದಾರೆ.

Leave a Comment