SAGARA | ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿಗೆ ಗಾಯವಾದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪ ಮುಂಬಾಳು ಕ್ರಾಸ್ ನಲ್ಲಿ ನಡೆದಿದೆ.
ಸಾಗರದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಜೆ.ಆರ್.ಬಿ ಹೆಸರಿನ ಖಾಸಗಿ ಬಸ್ ಪಲ್ಟಿಯಾಗಿದ್ದು, ಸುಮಾರು ಮೂವತ್ತಕ್ಕೂ ಹೆಚ್ಚು ಮಂದಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಪಾಯವಿಲ್ಲ ಎಂದು ತಿಳಿದುಬಂದಿದೆ.
ಗಾಯಾಳುಗಳಿಗೆ ಆನಂದಪುರ ಮತ್ತು ಸಾಗರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಘಟನೆ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.