ರಿಪ್ಪನ್‌ಪೇಟೆ ; ಇಂದಿನ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಮಕ್ಕಳಲ್ಲಿ ಕೇವಲ ಅಂಕಗಳ ಸ್ಪರ್ಧೆಯಲ್ಲ ಮೌಲ್ಯಧಾರಿತ ಶಿಕ್ಷಣವನ್ನು ಬೆಳೆಸುವತ್ತ ಪೋಷಕರು ಮತ್ತು ಶಾಲೆಗಳು ಹೆಚ್ಚಿನ ಆಸಕ್ತಿ ವಹಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ ವೈ. ಹೇಳಿದರು.
ಇಲ್ಲಿನ ಗುಡ್‌ಶಫರ್ಡ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣವು ವಿದ್ಯಾರ್ಥಿಗಳ ಜೀವನಕ್ಕೆ ದಿಕ್ಕು ತೋರಿಸುವ ಶಕ್ತಿಯಾಗಬೇಕು. ಶಿಸ್ತು ಪ್ರಾಮಾಣಿಕತೆ ಸಹಕಾರ ಮಾನವೀಯ ಮೌಲ್ಯಗಳು ಶಿಕ್ಷಣದ ಅವಿಭಾಜ್ಯ ಅಂಗಗಳಾಗಬೇಕು ಎಂದು ಹೇಳಿದರು.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿಧ್ಯಾರ್ಥಿಗಳು ಜ್ಞಾನವಷ್ಟೆ ಅಲ್ಲದೆ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದು ಅತ್ಯವಶ್ಯಕವಾಗಿದೆ ಎಂದರು.
ಗುಡ್‌ಶಫರ್ಡ್ ಹಿರಿಯ ಪ್ರಾಥಮಿಕ ಶಾಲೆಯ ಕಾರ್ಯದರ್ಶಿ ರೆವೆರೆಂಟ್ ಫಾದರ್ ಬಿನೋಯ್ ಮ್ಯಾಥ್ಯೂ ಆಧ್ಯಕ್ಷತೆ ವಹಿಸಿದ್ದರು.
ಶಾಲಾ ಅಡಳಿತ ಮಂಡಳಿ ಸದಸ್ಯ ಸೆಬಾಸಟಿನ್ ಮ್ಯಾಥ್ಯೂಸ್, ಆರಾಧನಾ ಸಂಸ್ಥೆಯ ಸಿಸ್ಟರ್ ಮರ್ಸಿ ಗ್ರಾಮ ಪಂಚಾಯಿತ್ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ಗ್ರಾಮ ಪಂಚಾಯಿತ್ ಸದಸ್ಯೆ ಮಹಾಲಕ್ಷ್ಮಿ, ಶಿಕ್ಷಣ ಇಲಾಖೆಯ ಕರಿಬಸಪ್ಪ, ಜಗದೀಶ ಕಾಗಿನಲ್ಲಿ, ಶಾಲಾ ಶಿಕ್ಷಕ ವೃಂದ ಪೋಷಕವರ್ಗ ಹಾಗೂ ಉಪಸ್ಥಿತರಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





