ಶಿವಮೊಗ್ಗ ; ಮೊಬೈಲ್ ಅಂಗಡಿಗೆ ನುಗ್ಗಿದ ಕಿಡಿಗೇಡಿಗಳು ಯುವಕನಿಗೆ ಚಾಕುವಿನಿಂದ ಇರಿದಿರುವ ಘಟನೆ ನಗರದ ಎಎ ಸರ್ಕಲ್ ಬಳಿ ಸೋಮವಾರ ನಡೆದಿದೆ.
ಲಷ್ಕರ್ ಮೊಹಲ್ಲಾ ನಿವಾಸಿ ಸಯ್ಯದ್ ಬರ್ಕತ್ (32) ಚಾಕು ಇರಿತಕ್ಕೊಳಗಾದ ವ್ಯಕ್ತಿ. ಈತ ನಗರದ ಅಮೀರ್ ಅಹ್ಮದ್ ಸರ್ಕಲ್ ನಲ್ಲಿ ಮೊಬೈಲ್ ಶಾಪ್ ನಡೆಸುತ್ತಿದ್ದ. ಮೊಬೈಲ್ ಅಂಗಡಿ ಬಳಿಯೇ ಹೋಗಿ ಕೈ, ಹೊಟ್ಟೆಯ ಭಾಗಕ್ಕೆ ಕಿಡಿಗೇಡಿಗಳು ಚಾಕುವಿನಿಂದ ಇರಿದಿದ್ದಾರೆ.

ಗಾಯಾಳು ಸಯ್ಯದ್ ಬರ್ಕತ್‌ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಳೆ ವೈಷಮ್ಯದಿಂದಾಗಿ ಚಾಕು ಇರಿದಿರುವ ಶಂಕೆ ವ್ಯಕ್ತವಾಗಿದೆ. ಚಾಕು ಇರಿದ ಕಿಡಿಗೇಡಿಗಳ ಶೋಧಕ್ಕೆ ಪೊಲೀಸರು ಮುಂದಾಗಿದ್ದು, ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





