ಹೊಸನಗರ ; ಕತ್ರಿಕೊಪ್ಪದ ಗುಂಡಪ್ಪ ನಿಧನ

Written by Mahesha Hindlemane

Published on:

ಹೊಸನಗರ ; ಅನಾರೋಗ್ಯದ ಹಿನ್ನಲೆಯಲ್ಲಿ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಈಡಿಗ ಜನಾಂಗದ ಕತ್ರಿಕೊಪ್ಪದ ಕೃಷಿಕ ಗುಂಡಪ್ಪ (80) ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ರಾತ್ರಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮೃತರು ಹೊಸನಗರ ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಗಾಯಿತ್ರಿ ರಾಮಚಂದ್ರಪ್ಪ ಮತ್ತು ಹೊಸನಗರ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಜಿ. ಪುಟ್ಟಸ್ವಾಮಿ, ಕೆ.ಜಿ. ಪ್ರಮೀಳಾ, ಕೆ.ಜಿ. ಶಿವಕುಮಾರ್, ಅಳಿಯ ವಕೀಲ ಕೆ.ವೈ.ರಾಮಚಂದ್ರ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ಸಂತಾಪ ;

ಮೃತರ ಕುಟುಂಬಕ್ಕೆ ನೋವು ಭರಿಸುವ‌ ಶಕ್ತಿ ಭಗವಂತ ನೀಡಲಿ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು, ಮಾಜಿ ಸಚಿವ ಹರತಾಳು ಹಾಲಪ್ಪ, ಮಾಜಿ ಶಾಸಕ ಬಿ.ಸ್ವಾಮಿರಾವ್, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಮಾಜಿ ಸದಸ್ಯ ಸುರೇಶ್ ಸ್ವಾಮಿರಾವ್, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ಜಿ.ನಾಗರಾಜ್, ತಾಲೂಕು ಪಂಚಾಯತಿ ಮಾಜಿ ಸದಸ್ಯ ಎರಗಿ ಉಮೇಶ್ ಸೇರಿದಂತೆ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.

Leave a Comment