ಹುಲಿಕಲ್ ಘಾಟ್‌ನಲ್ಲಿ ಧರೆಗೆ ಗುದ್ದಿದ ಬಸ್ ; ಮಗು ಸಾವು, ಹಲವರಿಗೆ ಗಾಯ !

Written by Mahesha Hindlemane

Updated on:

ಹೊಸನಗರ ; ಖಾಸಗಿ ಬಸ್‌ವೊಂದು ಹುಲಿಕಲ್ ಘಾಟಿಯ ಧರೆಗೆ ಗುದ್ದಿದ ಪರಿಣಾಮ ಮಗುವೊಂದು ಸಾವನ್ನಪ್ಪಿ, ಹಲವರು ಗಾಯಗೊಂಡ ಘಟನೆ ತಡರಾತ್ರಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ದಾವಣಗೆರೆಯಿಂದ ಮಂಗಳೂರು‌ ಕಡೆ ಹೋಗುತ್ತಿದ್ದ ಬಸ್ ಇದಾಗಿದ್ದು ನಿದ್ದೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಶರೀಫಾಬಿ (57), ಇಮಾಮ್ ಸಾಬ್ (73), ಸಫಾನ (28) ಎಂಬುವರನ್ನು ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಲ್ಲಿ ಖಾಸಗಿ ಬಸ್ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಘಟನೆಯ ಸಂಪೂರ್ಣ ವಿವರ ಇನ್ನಷ್ಟೇ ಲಭ್ಯವಾಗಬೇಕಿದೆ.

ಘಟನಾ ಸ್ಥಳಕ್ಕೆ ನಗರ ಪೊಲೀಸರು ಧಾವಿಸಿದ್ದು ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ್ದಾರೆ. ಮಂಗಳವಾರ ಮುಂಜಾನೆ ಪೊಲೀಸ್ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಘಟನೆಯ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ.

Leave a Comment