ಶಿವಮೊಗ್ಗ ; ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ಬಿ.ನಿಖಿಲ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.
ಹಾಲಿ ಎಸ್‌ಪಿ ಜಿ.ಕೆ.ಮಿಥುನ್‌ಕುಮಾರ್ ಅವರನ್ನು ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಬಿ.ನಿಖಿಲ್ ಅವರು ಹಾಲಿ ಕೋಲಾರ ಜಿಲ್ಲೆ ಎಸ್‌ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
2017ನೇ ಬ್ಯಾಚ್‌ನ ನಿಖಿಲ್ ಅವರು ರಾಯಚೂರು, ಕೋಲಾರದಲ್ಲಿ ಕೆಲಸ ಮಾಡಿ ಈಗ ಶಿವಮೊಗ್ಗಕ್ಕೆ ವರ್ಗಾವಣೆಗೊಂಡಿದ್ದಾರೆ.
ಜಿ.ಕೆ.ಮಿಥುನ್‌ಕುಮಾರ್ ಅವರು 2022 ಅಕ್ಟೋಬರ್ 5ರಂದು ಶಿವಮೊಗ್ಗ ಎಸ್‌ಪಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಯಶಸ್ವಿಯಾಗಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





