ತೀರ್ಥಹಳ್ಳಿ ; ರಾಷ್ಟ್ರೀಯ ಹೆದ್ದಾರಿ ಕೊಪ್ಪ-ತೀರ್ಥಹಳ್ಳಿ ನಡುವಿನ ತಿರಳೆಬೈಲು ಬಳಿ ಮರಕ್ಕೆ ಬೈಕ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ.
ಮೃತನನ್ನು ಕೋಣಂದೂರಿನ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಗಂಗಾಧರ್ (52) ಎಂದು ಗುರುತಿಸಲಾಗಿದೆ.
ತೀರ್ಥಹಳ್ಳಿ ಕಡೆಯಿಂದ ಕೊಪ್ಪ ಕಡೆ ಹೋಗುವಾಗ ತಿರಳೆಬೈಲು ಬಳಿ ಬೈಕ್ ಮರಕ್ಕೆ ಡಿಕ್ಕಿ ಹೊಡೆದು ಗಂಗಾಧರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





