ಹೊಸನಗರ ; ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು !

Written by Mahesha Hindlemane

Published on:

ಹೊಸನಗರ ; ಬೈಕ್‌ ಸವಾರನೊಬ್ಬ ನಿಯಂತ್ರಣ ತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ತಾಲೂಕಿನ ಮಾವಿನಕಟ್ಟೆ ಸಮೀಪ ತಡರಾತ್ರಿ 9 ಗಂಟೆ ಸುಮಾರಿಗೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮೃತ ವ್ಯಕ್ತಿಯನ್ನು ಚೇತನ್ ಮೊಗವೀರ ಎಂದು ಗುರುತಿಸಲಾಗಿದೆ. ಈತ ಉಡುಪಿ ನಗರದಲ್ಲಿನ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು ತಡರಾತ್ರಿ ಹೊಸನಗರದಿಂದ ತಮ್ಮ ಊರಾದ ಮಾವಿನಕಟ್ಟೆಗೆ ಎನ್‌ಎಸ್ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಮಾವಿನಕಟ್ಟೆ ಬಳಿ ರಸ್ತೆ ಮಧ್ಯಭಾಗದಲ್ಲಿ ಗುಂಡಿ ತೆಗೆಯಲಾಗಿದ್ದು, ಜೊತೆಗೆ ಮೋರಿ ಕಾಮಗಾರಿಗಾಗಿ ಜಲ್ಲಿ ಹಾಗೂ ಮರಳನ್ನು ರಸ್ತೆ ಬದಿಯಲ್ಲಿ ಹಾಕಲಾಗಿತ್ತು. ಆದರೆ, ಅಲ್ಲಿ ಯಾವುದೇ ಸೂಚನಾ ಫಲಕ ಅಥವಾ ಎಚ್ಚರಿಕೆ ವ್ಯವಸ್ಥೆ ಇರಲಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ‌.

ಘಟನಾ ಸ್ಥಳಕ್ಕೆ ಹೊಸನಗರ ವೃತ್ತ ನಿರೀಕ್ಷಕ ಗೌಡಪ್ಪಗೌಡ ಹಾಗೂ ಉಪ ನಿರೀಕ್ಷಕ ಶಂಕರ್ ಗೌಡ ಪಾಟಿಲ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment