ರಿಪ್ಪನ್‌ಪೇಟೆ ; ಹೊಸನಗರ ತಾಲೂಕಿನ ಸದಾನಂದ ಶಿವಯೋಗಾಶ್ರಮ ಮೂಲೆಗದ್ದೆ ಮಠದಲ್ಲಿ ಮಕರ ಸಂಕ್ರಾಂತಿಯ ದಿನ ಜನವರಿ 15 ಗುರುವಾರದಂದು ಮೂಲೆಗದ್ದ ಮಠದ ದಾಸೋಹ ಭವನಕ್ಕೆ ಆನಂದಪುರ ಮುರುಘಾರಾಜೇಂದ್ರಮಠದ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮೀಜಿ ಅಡಿಗಲ್ಲು ಸಮಾರಂಭವನ್ನು ನೆರವೇರಿಸುವರೆಂದು ಮಠದ ಪ್ರಕಟಣೆ ತಿಳಿಸಿದೆ.
ನಂತರ ಆನಂದಪುರ ಮುರುಘಾರಾಜೇಂದ್ರ ಮಠದ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮೀಜಿ ಅಡಿಗಲ್ಲು ಸಮಾರಂಭದ ದಿವ್ಯಸಾನ್ನಿಧ್ಯದಲ್ಲಿ ಮಕರ ಸಂಕ್ರಾಂತಿಯ ಧರ್ಮ ಜಾಗೃತಿ ಸಮಾರಂಭ ಸಾನಿಧ್ಯ ವಹಿಸಿ ಆಶೀರ್ವಚನ ನೀಡುವರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಮಹಾಸ್ವಾಮೀಜಿ ವಹಿಸುವರು. ನಾಡಿನ ಹರಗುರು ಚರಮೂರ್ತಿಗಳು ಹಾಗೂ ರಾಜಕೀಯ ಮುಖಂಡರು ಪಾಲ್ಗೊಳ್ಳಲಿದ್ದಾರೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ !
ರಿಪ್ಪನ್‌ಪೇಟೆ ; ಹರತಾಳು ಗ್ರಾಮದ ದೇವಿಕೊಪ್ಪ ನಿವಾಸಿ ಗುರುರಾಜ್ (45) ತಮ್ಮ ಮನೆಯ ಜಾನುವಾರ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಗುರುರಾಜ್ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು ಇದಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





