ತೀರ್ಥಹಳ್ಳಿ ; ಭಾರತೀಪುರ ಬಳಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ; ಸ್ಥಳದಲ್ಲೇ ಇಬ್ಬರ ದುರ್ಮರಣ

Written by Mahesha Hindlemane

Published on:

ತೀರ್ಥಹಳ್ಳಿ ; ಕಾರು ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಭಾರತೀಪುರ ಸಮೀಪ ತಡರಾತ್ರಿ ಅಪಘಾತ ಸಂಭವಿಸಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶಿವಮೊಗ್ಗ ಕಡೆಯಿಂದ ತೆರಳುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಹಾಗೂ ಎದುರಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಡುವೆ ಈ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.

ಕಾರಿನಲ್ಲಿ ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಈ ಪೈಕಿ ಕಾರು ಚಾಲಕ ಹಾಗೂ ಪಕ್ಕದ ಸೀಟಿನಲ್ಲಿ ಕುಳಿತಿದ್ದ ಮಹಿಳೆ ಗಂಭೀರ ಗಾಯಗಳಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದವರೆಲ್ಲರೂ ಶೃಂಗೇರಿ ಸಮೀಪದ ಮೆಣಸೆ ಗ್ರಾಮದವರು ಎಂದು ತಿಳಿದುಬಂದಿದೆ.

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಉಳಿದ ಪ್ರಯಾಣಿಕರಿಗೆ ಗಾಯಗಳಾಗಿರುವ ಸಾಧ್ಯತೆ ಇದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ತೀರ್ಥಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಅಪಘಾತಕ್ಕೆ ಕಾರಣಗಳ ಬಗ್ಗೆ ತನಿಖೆ ಮುಂದುವರಿದಿದ್ದು, ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿವೆ.

Leave a Comment