ವಿಜೃಂಭಣೆಯಿಂದ ಜರುಗಿದ ಕೆಂಚನಾಲ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ

Written by Mahesha Hindlemane

Updated on:

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ಧ ಕೆಂಚನಾಲ ಮಾರಿಕಾಂಬಾ ದೇವಿಯ ಬೇಸಿಗೆ ಜಾತ್ರಾ ಮಹೋತ್ಸವ ಅತ್ಯಂತ ಸಡಗರ ಸಂಭ್ರಮದಿಂದ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಬುಧವಾರ ವಿಜೃಂಭಣೆಯಿಂದ ಜರುಗಿತು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮುಂಜಾನೆ ಬ್ರಾಹ್ಮಿ ಮೂಹರ್ತದಲ್ಲಿ ದೇವಿಗೆ ವಿಶೇಷ ಹೂವಿನ ಅಲಂಕಾರ ಪೂಜಾ ಕೈಂಕರ್ಯಗಳು ಜರುಗಿದವು. ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಆಗಮಿಸಿದ ಭಕ್ತರು ಬೆಳಗ್ಗೆಯಿಂದಲೇ ದೇವಸ್ಥಾನದ ಬಳಿ ಸರತಿ ಸಾಲಿನಲ್ಲಿ ನಿಂತು ದೇವಿಗೆ ಹರಕೆ ಕಾಣಿಕೆ ಸಮರ್ಪಿಸಿದರು.

ವರ್ಷದಲ್ಲಿ ಎರಡು ಭಾರಿ ಆಚರಿಸುವ ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆಯು ಮಳೆಗಾಲದಲ್ಲಿ ಮಂಗಳವಾರ ಬೇಸಿಗೆಯಲ್ಲಿ ಬುಧವಾರ ಆಚರಿಸುವುದು ವಾಡಿಕೆ. ಸುಮಾರು 20 ಸಾವಿರಕ್ಕೂ ಅಧಿಕ ಭಕ್ತರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು.

ಜಾತ್ರಾ ಮಹೋತ್ಸವದಲ್ಲಿ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದೇವಿಯ ದರ್ಶನಾಶೀರ್ವಾದ ಪಡೆದರು.

ತಾಲೂಕು ದಂಡಾಧಿಕಾರಿ ಹಾಗೂ ಸಿಬ್ಬಂದಿ ವರ್ಗ ರಕ್ಷಣಾ ಇಲಾಖೆಯು ಜಾತ್ರಾ ಮಹೋತ್ಸವದ ಶಾಂತಿ ಸುವ್ಯವಸ್ಥೆಯ ಉಸ್ತುವಾರಿ ನಡೆಸಿದವು.

Leave a Comment