ಮಕರ ಸಂಕ್ರಾಂತಿ ಅಂಗವಾಗಿ ಹೊಸನಗರ ಶ್ರೀ ಲಕ್ಷ್ಮೀ ಜನಾರ್ಧನಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ಸಂಪನ್ನ

Written by Mahesha Hindlemane

Published on:

ಹೊಸನಗರ ; ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮೀ ಜನಾರ್ಧನಸ್ವಾಮಿ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿ-ಭಾವದಿಂದ ಸಂಪನ್ನಗೊಂಡವು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಬೆಳಗ್ಗೆ ದೇವಸ್ಥಾನದಲ್ಲಿ ಭಕ್ತರ ಕಲ್ಯಾಣಾರ್ಥವಾಗಿ ಪವಮಾನ ಸೂಕ್ತ ಪಾರಾಯಣ ನಡೆಯಿತು. ನಂತರ ಪಂಚಾಮೃತಾಭಿಷೇಕ ಹಾಗೂ ಪವಮಾನ ಕಲಶಾಭಿಷೇಕವನ್ನು ಶ್ರೀ ದೇವರಿಗೆ ಶ್ರದ್ಧಾಪೂರ್ವಕವಾಗಿ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಭಕ್ತರಿಂದ ಅಷ್ಟೋತ್ತರ ಶತಾಧಿಕ ಸಹಸ್ರನಾಮ ಪಾರಾಯಣವೂ ನಡೆಯಿತು.

ಮಧ್ಯಾಹ್ನ ಮಹಾಮಂಗಳಾರತಿ ನೆರವೇರಿಸಿ ಭಕ್ತರಿಗೆ ತೀರ್ಥ-ಪ್ರಸಾದ ವಿತರಿಸಲಾಯಿತು. ಸಂಜೆ ವೇಳೆಗೆ ವಿಷ್ಣು ಸಹಸ್ರನಾಮ ಪಾರಾಯಣ, ಭಜನೆ ಹಾಗೂ ಮಹಾಮಂಗಳಾರತಿ ನೆರೆವೇರಲಿದೆ. ರಾತ್ರಿ ತೀರ್ಥ-ಪ್ರಸಾದ ವಿತರಣೆಯೊಂದಿಗೆ ದಿನಪೂರ್ತಿ ಪೂಜಾ ಕಾರ್ಯಕ್ರಮಗಳು ಜರುಗಲಿವೆ.

ಈ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹೊಸನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು  ಈಗಾಗಲೇ ದರ್ಶನ ಪಡೆದುಕೊಂಡಿದ್ದಾರೆ.

ದೇವಸ್ಥಾನ ಸಮಿತಿ ಅಧ್ಯಕ್ಷ ಎಂ.ಎನ್. ಸುಧಾಕರ್ ಮತ್ತು ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲ ಭಕ್ತರಿಗೆ ಕೃತಜ್ಞತೆ ಸಲ್ಲಿಸಿದರು.

Leave a Comment