ಹೊಸನಗರ ; ಸಂಕ್ರಾಂತಿ ಹಬ್ಬದ ದಿನದಂದು ತಾಲ್ಲೂಕಿನ ಮೂಲೆಗದ್ದೆಯ ಶ್ರೀ ಸದಾನಂದ ಶಿವಯೋಗಾಶ್ರದಲ್ಲಿ ಹಮ್ಮಿಕೊಂಡಿದ್ದ ಸಂಕ್ರಾಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ದಾಸೋಹ ಭವನ ಕಟ್ಟಡದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಈ ವೇಳೆ ಆನಂದಪುರ ಮುರುಘಾಮಠದ ಮುರುಘಾ ರಾಜೇಂದ್ರ ಮಹಾಸ್ವಾಮಿಗಳು, ಮಾಜಿ ಶಾಸಕ ಬಿ.ಸ್ವಾಮಿರಾವ್, ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಸ್ವಾಮೀಜಿ, ಪ್ರಮುಖರಾದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೋಡೂರು ಚಂದ್ರಮೌಳಿ, ಸಾಗರದ ಕೆ.ಎಸ್. ಪ್ರಶಾಂತ್ ಶಿವಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





