ಹೊಸನಗರ ; ಪಟ್ಟಣದ ಗ್ರಾಮ ದೇವತೆ ಶ್ರೀ ಮಾರಿಕಾಂಬಾ ದೇವಿಯ 9 ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವಕ್ಕೆ ಇಂದು ಅದ್ದೂರಿಯ ಚಾಲನೆ ನೀಡಲಾಯಿತು.
ವಿಡಿಯೋ ವೀಕ್ಷಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://www.facebook.com/share/v/17y4MU5Ww8/
ಬೆಳಗ್ಗೆ ಶ್ರೀ ಗಣಪತಿ ದೇವಸ್ಥಾನದಿಂದ ಅಮ್ಮನವರ ಮೂರ್ತಿಯನ್ನು ವಿಶೇಷ ಪೂಜೆ ಸಲ್ಲಿಸಿ ಹಳೆ ಸಾಗರ ರಸ್ತೆಯಲ್ಲಿರುವ ಶ್ರೀ ದುರ್ಗಾಂಬಾ ದೇವಸ್ಥಾನದಲ್ಲಿ ಪೂಜೆ, ಪುನಸ್ಕಾರ ಮೂಲಕ ಪ್ರತಿಷ್ಠಾಪಿಸಲಾಯಿತು.
ಈ ಸಂದರ್ಭದಲ್ಲಿ ಜಾತ್ರಾ ಸಮಿತಿ ಸದಸ್ಯರುಗಳು ಪಟ್ಟಣದ ಪ್ರಮುಖರು ಭಕ್ತರ ಅಸಂಖ್ಯಾತ ಭಕ್ತ ವೃಂದದವರು ಸಂಭ್ರಮದಿಂದ ಪಾಲ್ಗೊಂಡಿದ್ದರು.

ಸಾಗರ-ಹೊಸನಗರ ಕ್ಷೇತ್ರದ ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ನಂತರ ಸಾರ್ವಜನಿಕರಿಗೆ ಏರ್ಪಡಿಸಿದ ಅನ್ನಸಂತರ್ಪಣೆ ಕಾರ್ಯದಲ್ಲಿ ಪಾಲ್ಗೊಂಡು ನೆರೆದಿದ್ದ ಭಕ್ತ ಸಮೂಹಕ್ಕೆ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದಕ್ಕೆ ಅಭಿನಂದಿಸಿ ಶುಭ ಹಾರೈಸಿದರು.
ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯದಲ್ಲಿ ಸಹಸ್ರಾರು ಜನ ಪಾಲ್ಗೊಂಡಿದ್ದರು. ಮಂಗಳವಾರ ರಾತ್ರಿ ಶ್ರೀ ಅಮ್ಮನವರ ಮೂರ್ತಿಯನ್ನು ಅಮ್ಮನವರ ತವರುಮನೆಯಾದ ಶ್ರೀ ದುರ್ಗಾಂಬಾ ದೇವಸ್ಥಾನದಿಂದ ಮಾರಿಗುಡ್ಡದಲ್ಲಿರುವ ಶ್ರೀ ಮಾರಿಕಾಂಬಾ ದೇವಸ್ಥಾನಕ್ಕೆ ಕೊಂಡೊಯ್ಯುವುದು ವಾಡಿಕೆಯಾಗಿದ್ದು ಅಲ್ಲೇ 8 ದಿನಗಳ ಕಾಲ ವಿಶೇಷ ಪೂಜೆ, ಪುನಸ್ಕಾರ ನಡೆಸಿ ಜ. 28ರ ಬುಧವಾರ ರಾತ್ರಿ ವಿಶೇಷ ವಿಸರ್ಜನಾ ಪೂಜೆ ಸಲ್ಲಿಸಿ ಅದ್ದೂರಿಯ ವಿಸರ್ಜನಾ ಮೆರವಣಿಗೆಯೊಂದಿಗೆ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





