ಶಿವಮೊಗ್ಗ ; ಸಂಸದ ಬಿ.ವೈ. ರಾಘವೇಂದ್ರ ಅವರ ಕಾರಿಗೆ ಮತ್ತೊಂದು ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಕುಂಚೇನಹಳ್ಳಿ ಗ್ರಾಮದ ಬಳಿ ನಡೆದಿದೆ.
ಸಂಸದರು ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಈ ಅಪಘಾತ ನಡೆದಿದೆ.
ಕುಂಚೇನಹಳ್ಳಿ ಗ್ರಾಮದ ಸಮೀಪ ಸಂಸದರ ಕಾರು ಚಲಿಸುತ್ತಿದ್ದಾಗ ಹಿಂದಿನಿಂದ ಬಂದ ಬೊಲೇರೊ ಕಾರು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಕಾರುಗಳಿಗೆ ಹಾನಿಯಾಗಿದೆ. ಸಂಸದ ರಾಘವೇಂದ್ರ ಸೇರಿದಂತೆ ಕಾರಿನಲ್ಲಿದ್ದ ಸಂಸದರ ಕಚೇರಿ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.
ಎಸ್ಕಾರ್ಟ್ ವಾಹನದಲ್ಲೇ ವಿಮಾನ ನಿಲ್ದಾಣದವರೆಗೂ ಪ್ರಯಾಣ ಬೆಳೆಸಿದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





