ರಿಪ್ಪನ್‌ಪೇಟೆ ; 77ನೇ ಗಣರಾಜ್ಯೋತ್ಸವವನ್ನು ರಿಪ್ಪನ್‌ಪೇಟೆಯ ವಿವಿಧೆಡೆಯಲ್ಲಿ ಸಂಭ್ರಮ ಸಡಗರದೊಂದಿಗೆ ಆಚರಿಸಲಾಯಿತು.
ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತ್ ಆವರಣದಲ್ಲಿ ಗ್ರಾಮಾಧ್ಯಕ್ಷೆ ಧನಲಕ್ಷ್ಮಿ, ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ.ರಾಜುರೆಡ್ಡಿ, ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯದಲ್ಲಿ ಮೇಲ್ವಿಚಾರಕ ರಾಘವೇಂದ್ರ, ಬಿಸಿಎಂ.ಬಾಲಕೀಯರ ವಿದ್ಯಾರ್ಥಿ ನಿಲಯದಲ್ಲಿ ಮೇಲ್ವಿಚಾರಕಿ ಸುಮಿತ್ರಬಾಯಿ, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡಾ.ಆಂಜನೇಯ, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷ ಮಂಜಪ್ಪ, ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷರು.ಸರ್ಕಾರಿ ಪದವಿ ಪೂರ್ವ ಕಾಲೇಜ್‌ನಲ್ಲಿ ಪ್ರಾಚಾರ್ಯ ಕೃಷ್ಣಮೂರ್ತಿ, ಸರ್ಕಾರಿ ಪದವಿ ಕಾಲೇಜ್‌ನಲ್ಲಿ ಪ್ರಾಚಾರ್ಯ ಪ್ರೋ.ವಿರುಪಾಕ್ಷಪ್ಪ, ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷರು, ಸರ್ಕಾರಿ ಪಶು ಆಸ್ಪತ್ರೆಯಲ್ಲಿ ಡಾ.ಸಂತೋಷ ಮೇರಿಮಾತಾ ಪ್ರೌಢಶಾಲೆಯಲ್ಲಿ ಗುಡ್‌ಶಫರ್ಡ್ ಪ್ರಾಥಮಿಕ ಪಾಠಶಾಲೆಯಲ್ಲಿ, ಅರಸಾಳು ವಲಯ ಅರಣ್ಯಾಧಿಕಾರಿ ಕಛೇರಿಯಲ್ಲಿ ಅರಣ್ಯಾಧಿಕಾರಿ ಶರಣಯ್ಯ, ಅರಸಾಳು ಗ್ರಾಮ ಪಂಚಾಯಿತ್ ಅಧ್ಯಕ್ಷೆ, ಕೆಂಚನಾಲ ಗ್ರಾಮ ಪಂಚಾಯಿತ್ ಅಧ್ಯಕ್ಷ ಮಹಮ್ಮದ್ ಷರೀಫ್, ಕೋಡೂರು ಗ್ರಾ.ಪಂ.ನಲ್ಲಿ ಅಧ್ಯಕ್ಷ ಜಯಪ್ರಕಾಶ್ ಧ್ವಜಾರೋಹಣ ನೆರವೇರಿಸಿ ಧ್ವಜವಂದನೆ ಸ್ವೀಕರಿಸಿದರು.
ನಂತರ ಗ್ರಾಮ ಪಂಚಾಯಿತ್ ಸಭಾಭವನದಲ್ಲಿ ನಡೆದ ಮನರೇಗಾ ಹೆಸರು ಬದಲಾವಣೆಯ ಕುರಿತು ಸಾರ್ವಜನಿಕರ ಮತ್ತು ಪಂಚಾಯಿತ್ ಸದಸ್ಯರ ಚರ್ಚೆ ನಡೆಯಿತು.

ಕೇಂದ್ರ ಸರ್ಕಾರ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗಖಾತ್ರಿ ಯೋಜನೆಯ ಹೆಸರನ್ನು ಬದಲಾಯಿಸಿ ಕೆಲವು ನಿಯಮಗಳನ್ನು ಅನುಷ್ಟಾನಗೊಳಿಸುವ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ವಿರೋಧಿಸುವ ಬದಲು ಮಾಡಲಾಗುವ ನಿಯಮಗಳಿಂದ ನಿರುದ್ಯೋಗಿಗಳಿಗೆ ಕೂಲಿ ಕಾರ್ಮಿಕರಿಗೆ ನೇರವಾಗಿ ಅವರ ಖಾತೆಗೆ ಹಣ ಜಮಾ ಆಗುವ ಮೂಲಕ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದಂತಾಗುತ್ತದೆಂಬ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಮೂಲಕ ಅನುಷ್ಟಾನಕ್ಕೆ ಸಾಕಷ್ಟು ಜನರು ಬೆಂಬಲ ವ್ಯಕ್ತಪಡಿಸಿದರೆ ಕೆಲವೇ ಬೆರಣಿಕೆಯ ಜನ ವಿರೋಧ ವ್ಯಕ್ತಪಡಿಸಿ ನಿರ್ಣಯ ಬರೆಯುವಂತೆ ಸಭೆಯಲ್ಲಿ ಒತ್ತಡ ಹಾಕಿದರು.
ಇನ್ನೂ ಯಾವುದೇ ಸರ್ಕಾರ ಅಧಿಕಾರ ನಡೆಸಲಿ ಜನಪರವಾಗಿ ಅನುಷ್ಟಾನಗೊಳಿಸುವ ಜನಹಿತ ಕಾರ್ಯಗಳು ನೇರವಾಗಿ ಫಲಾನುಭವಿಗಳನ್ನು ತಲುಪುವಂತಾಗ ಬೇಕು ಆ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಲಾಗುತ್ತಿರುವ ಮನೆರೇಗ ಯೋಜನೆಯ ಪರವಾಗಿ ಗ್ರಾಮ ಪಂಚಾಯಿತ್ ಸದಸ್ಯ ರಮೇಶ್ ಪಿ. ಸುಂದರೇಶ್, ನರಸಿಂಹ, ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ರಂಜಿತ, ಆರ್.ರಾಘವೇಂದ್ರ, ಮಾತತಾಡುತ್ತಿದ್ದಂತೆ ಹಲವು ಸಾರ್ವಜನಿಕರು ಬೆಂಬಲ ವ್ಯಕ್ತಪಡಿಸಿದರು.
ಗ್ರಾಮ ಪಂಚಾಯಿತ್ ಸದಸ್ಯ ಡಿ.ಈ.ಮಧುಸೂಧನ್, ಪ್ರಕಾಶ ಪಾಲೇಕರ್ ವಿರೋಧಿಸಿ ಇದರಿಂದ ಕಾಂಗ್ರೆಸ್ ಸರ್ಕಾರ ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸಾಕಷ್ಟು ಅಭಿವೃದ್ದಿಗೆ ಸಹಕಾರಯಾಗಿದೆ ಇದನ್ನು ಮೊದಲಿನಂತೆ ಮುಂದುವರಿಸಿ ಹೆಸರು ಬದಲಾಯಿಸಬಾರದೆಂದು ನಿರ್ಣಯ ಕೈಗೊಂಡರು.
ಒಟ್ಟಾರೆಯಾಗಿ ಈ ವಿಚಾರ ಸಾರ್ವಜನಿಕರರ ವಿಶೇಷ ಗ್ರಾಮ ಸಭೆಯ ಮೂಲಕ ಚರ್ಚೆಯಾಗಬೇಕು ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದರು.
ಸಭೆಯಲ್ಲಿ ಆರ್.ಎನ್.ಮಂಜುನಾಥ, ನಿವೃತ್ತ ನೌಕರ ಹಬೀಬ್ ಸಾಬ್, ಪತ್ರಕರ್ತ ಪರಶುರಾಮ ಮಾತನಾಡಿದರು. ಗ್ರಾಮ ಪಂಚಾಯಿತ್ ಅಧ್ಯಕ್ಷೆ ಧನಲಕ್ಷ್ಮಿ ಅಧ್ಯಕ್ಷತೆ ವಹಿಸಿದ್ದರು.
ಪಿಡಿಒ ನಾಗರಾಜ್ ಸ್ವಾಗತಿಸಿ, ಸಭೆಯಲ್ಲಿ ಕೇಂದ್ರದ ಮನರೇಗಾ ಬಗ್ಗೆ ಸಭೆಯಲ್ಲಿ ಮುಕ್ತ ಚರ್ಚೆಗೆ ವಿಷಯ ಮಂಡಿಸಿದರು. ನಾಗೇಶ ಕಾರ್ಯಕ್ರಮ ನಿರೂಪಿಸಿ ಪಿಡಿಒ ನಾಗರಾಜ ವಂದಿಸಿದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





