ಹೊಸನಗರ ; ಶಾಸಕ ಆರಗ ಜ್ಞಾನೇಂದ್ರ ಸಹಾಯಕನಿಗೆ ನ್ಯಾಯಾಂಗ ಬಂಧನ  !

Written by Mahesha Hindlemane

Published on:

ಹೊಸನಗರ ; ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪದಡಿ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರರ ಹೊಸನಗರ ಭಾಗದ ಸಹಾಯಕನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಇಲ್ಲಿನ ಜೆ.ಎಂ.ಎಫ್.ಸಿ (JMFC) ನ್ಯಾಯಾಲಯ ಆದೇಶ ಹೊರಡಿಸಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮಳಲಿ ಗ್ರಾಮದ ನಿವಾಸಿ, ಶಾಸಕ ಆರಗ ಜ್ಞಾನೇಂದ್ರರ ಸಹಾಯಕ ರಾಜೇಶ್ ಹಿರಿಮನೆ ಬಂಧಿತ ಆರೋಪಿ. ಈತ ರಾಹುಲ್ ಗಾಂಧಿಯವರ ಮುಖದ ಅರ್ಧ ಭಾಗ ಹಾಗೂ ಪಾಕಿಸ್ತಾನ ಸೇನೆಯ ಸಮವಸ್ತ್ರ ಧರಿಸಿದ ಅಧಿಕಾರಿ ‘ಅಸಿಮ್’ (ASIM) ಎಂಬುವರ ಫೋಟೋವನ್ನು ಎಡಿಟ್ ಮಾಡಿ ಸೇರಿಸಿದ್ದರು. ಈ ಚಿತ್ರಕ್ಕೆ “ONE AGENDA” ಎಂಬ ಟ್ಯಾಗ್ ಲೈನ್ ನೀಡಿ, ತ‌ನ್ನ ಫೇಸ್‌ಬುಕ್‌ನಲ್ಲಿ ಹರಿಬಿಟ್ಟಿದ್ದ.

​ಈ ಕೃತ್ಯದ ಕುರಿತಂತೆ 2025ರ ಮೇ 20 ರಂದು ನಗರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ (BNS) ಕಾಯ್ದೆಯ ಸೆಕ್ಷನ್ 353(2) ರ ಅಡಿಯಲ್ಲಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದರು.

ನ್ಯಾಯಾಂಗ ಬಂಧನ ;

ಇಂದು ಪ್ರಕರಣದ ವಿಚಾರಣೆ ನಡೆಸಿದ ಇಲ್ಲಿನ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರು ಆರೋಪಿ ರಾಜೇಶ್ ಹಿರಿಮನೆ ಅವರನ್ನು ಫೆ. 24 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಆದೇಶ ನೀಡಿದ್ದಾರೆ.

Leave a Comment