ರಿಪ್ಪನ್ಪೇಟೆ ; ಇತಿಹಾಸ ಪ್ರಸಿದ್ದ ಹೋಗಳಿಕಮ್ಮ ವನದೇವಿಯ ಜಾತ್ರಾ ಮಹೋತ್ಸವವು ಅದ್ದೂರಿಯಾಗಿ ಜರುಗಿತು.
ಅರಸಾಳು-ಹೆದ್ದಾರಿಪುರ ಗ್ರಾಮ ಪಂಚಾಯಿತ್ ವ್ಯಾಪ್ತಿಯಲ್ಲಿ ಬರುವ ಇತಿಹಾಸ ಪ್ರಸಿದ್ದ ಹೊಗಳಿಕಮ್ಮ ದೇವಿಯ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ದೇವಿಗೆ ವಿಶೇಷ ಅಲಂಕಾರ ಪೂಜೆ ನೈವೇದ್ಯ ಮಹಾ ಮಂಗಳಾರತಿ ತೀರ್ಥಪ್ರಸಾದ ವಿತರಣೆ ಜರುಗಿತು.
ಸಹಸ್ರಾರು ಭಕ್ತರು ಶ್ರದ್ದಾ ಭಕ್ತಿಯಿಂದ ದೇವಿಯ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ದೇವಿಗೆ ಭಕ್ತಿಯ ಸಮರ್ಪಣೆ ಸಲ್ಲಿಸಿದರು. ನಂತರ ಸಾಮೂಹಿಕ ಅನ್ನಸಂತರ್ಪಣೆ ನೆರವೇರಿತು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





