ಮಕ್ಕಳಲ್ಲಿ ಪರೀಕ್ಷೆಯ ಭಯ ಬೇಡ ಆತ್ಮಸ್ಥೈರ್ಯದಿಂದ ಎದುರಿಸುವ ಮನೋಭಾವನೆ ಬೆಳೆಸಿ ; ಜಿಪಂ ಸಿಇಒ ಹೇಮಂತ್

Written by Mahesha Hindlemane

Published on:

ರಿಪ್ಪನ್‌ಪೇಟೆ ; ಮಕ್ಕಳಲ್ಲಿ ಪರೀಕ್ಷೆಯ ಭಯ ಬೇಡಾ ಆತ್ಮಸ್ಥೈರ್ಯದಿಂದ ಎದುರಿಸುವ ಮನೋಬಲವನ್ನು ಬೆಳೆಸಬೇಕು. ಎಸ್.ಎಸ್.ಎಲ್.ಸಿ. ಪರೀಕ್ಷೆ ವಿದ್ಯಾರ್ಥಿ ಜೀವನದ ಮಹತ್ತರ ಘಟ್ಟ ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗದೇ ಧೈರ್ಯದಿಂದ ಎದುರಿಸುವಂತಾಗಬೇಕು ಎಂದು ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೇಮಂತ್ ಎನ್ ಕರೆ ನೀಡಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್ ಪ್ರೌಢಶಾಲಾ ವಿಭಾಗದಲ್ಲಿ ನಡೆದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಮತ್ತು ಪೋಷಕರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪರೀಕ್ಷಾ ಭಯದಿಂದ ಹೊರಬಂದು ಮುಕ್ತವಾಗಿ ಪರೀಕ್ಷೆ ಎದುರಿಸಬೇಕು ಎಂದರು.

ಈ ಬಾರಿ ಎಸ್.ಎಸ್.ಎಲ್.ಸಿ. ಜಿಲ್ಲೆಯಲ್ಲಿ ಪ್ರತಿಶತ ನೂರು ಫಲಿತಾಂಶ ಪಡೆಯುವ ಬಗ್ಗೆ ಹಲವು ರೀತಿಯಲ್ಲಿ ಕಾರ್ಯಗಾರವನ್ನು ನಡೆಸಲಾಗುತ್ತಿದ್ದು ವಿದ್ಯಾರ್ಥಿ ಸಮೂಹ ಹೆಚ್ಚು ವ್ಯಾಸಂಗದೊಂದಿಗೆ ಉತ್ತರ ಪತ್ರಿಕೆಯಲ್ಲಿ ಪ್ರಶ್ನೆಗಳಿಗೆ ಸಮರ್ಪಕವಾಗಿ ಉತ್ತರವನ್ನು ಬರೆಯಲು ಸನ್ನದ್ಧರಾಗಿ ಎಂದು ಹೇಳಿದರು.

ಎಸ್.ಡಿ.ಎಂ.ಸಿ. ಅಧ್ಯಕ್ಷ ಚಂದ್ರಪ್ಪ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಶಿವಮೊಗ್ಗ ಡಯಟ್ ಪ್ರಾಂಶುಪಾಲ ಹೆಚ್.ಆರ್. ಕೃಷ್ಣಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ ವೈ, ಸದಸ್ಯರಾದ ಪುನ್ನೋಜಿರಾವ್, ನಿರಂಜನಮೂರ್ತಿ, ಈಶ್ವರ ಮಳಕೊಪ್ಪ, ಹನೀಫ್, ಉಪಪ್ರಾಚಾರ್ಯ ಕೆಸವಿನಮನೆ ರತ್ನಾಕರ್, ಶಿಕ್ಷಕ ವೃಂದ ಹಾಜರಿದ್ದರು.

Leave a Comment